ಶನಿವಾರ, ಜೂನ್ 6, 2020
27 °C

ಬೀದರ್: ಕೊರೊನಾ ಸೋಂಕಿತರ ಸಂಖ್ಯೆ 74ಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್‌: ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ ಆರು ಜನರಿಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 74ಕ್ಕೆ ಏರಿದೆ. ಹುಮನಾಬಾದ್ ತಾಲ್ಲೂಕಿನ ಹಳ್ಳಿಖೇಡ, ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಹಾಗೂ ಹಲಸಿತೂಗಾಂವದ ತಲಾ ಇಬ್ಬರಿಗೆ ಸೋಂಕು ತಗುಲಿದೆ.

ಮುಂಬೈನಿಂದ ಮರಳಿ ಬಂದವರನ್ನು ಆಯಾ ಗ್ರಾಮಗಳ ಶಾಲೆಗಳಲ್ಲಿ ಕ್ವಾರಂಟೈನ್‌ನಲ್ಲಿ ಇಡಲಾಗಿದ್ದು, ಗಂಟಲು ದ್ರವ ಮಾದರಿ ಪಡೆದು ಪರಿಕ್ಷೆ ನಡೆಸಿದಾಗ ಮಹಾರಾಷ್ಟ್ರದಿಂದ ಬಂದ ನಾಲ್ವರಿಗೆ ಹಾಗೂ ತೆಲಂಗಾಣದಿಂದ ಬಂದ ಇಬ್ಬರಿಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ.

ವೈರಾಣು ಹಳ್ಳಿಗಳಿಗೂ ಕಾಲಿಟ್ಟಿರುವುದರಿಂದ ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು