ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್ ಜಿಲ್ಲಾಧಿಕಾರಿ ರಾಮಚಂದ್ರನ್ ಅವರಿಗೆ ಮತ್ತೆ ಕೋವಿಡ್ ಪಾಸಿಟಿವ್

Last Updated 10 ಸೆಪ್ಟೆಂಬರ್ 2020, 17:02 IST
ಅಕ್ಷರ ಗಾತ್ರ

ಬೀದರ್: ಜಿಲ್ಲಾಧಿಕಾರಿ ರಾಮಚಂದ್ರನ್ ಅವರಿಗೆ ಮತ್ತೆ ಕೋವಿಡ್ ಪಾಸಿಟಿವ್ ಬಂದಿದೆ. ಸೆಪ್ಟೆಂಬರ್ 2 ರಂದು ಅವರ ವೈದ್ಯಕೀಯ ವರದಿ ಪಾಸಿಟಿವ್‌ ಬಂದಿತ್ತು. ಅವರು ಮನೆಯಲ್ಲೇ ಕ್ವಾರಂಟೈನ್‌ ಆಗಿದ್ದಾರೆ. ಬ್ರಿಮ್ಸ್ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಒಂದು ವಾರ ಕಳೆದ ನಂತರ ಬುಧವಾರ ಮತ್ತೆ ಪರೀಕ್ಷೆ ಮಾಡಿಸಿಕೊಂಡಿದ್ದರು. ಗುರುವಾರ ವರದಿ ಪಾಸಿಟಿವ್ ಬಂದಿದೆ.

ಪ್ರಸ್ತುತ ಜಿಲ್ಲಾಧಿಕಾರಿ ಆರೋಗ್ಯ ಚೆನ್ನಾಗಿದೆ. ಮತ್ತೆ ಮೂರು ದಿನಗಳ ನಂತರ ಪರೀಕ್ಷೆ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಗುರುವಾರ 98 ಮಂದಿಗೆ ಕೋವಿಡ್ ಸೋಂಕು ತಗುಲಿದ್ದು, ಕೋವಿಡ್ ವೈರಾಣು ಪೀಡಿತರ ಸಂಖ್ಯೆ 5200ಕ್ಕೆ ಹೆಚ್ಚಿದೆ. 528 ಪ್ರಕರಣಗಳು ಸಕ್ರಿಯವಾಗಿವೆ. ಕೋವಿಡ್ ಆಸ್ಪತ್ರೆಯಿಂದ 94 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಈವರೆಗೆ 4525 ಮಂದಿ ಬಿಡುಗಡೆ ಹೊಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT