ಬೀದರ್: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಬೀದರ್ ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಚನ್ನಬಸವ ಪಟ್ಟದೇವರ ರಂಗಮಂದಿರದಲ್ಲಿ ಸೋಮವಾರ ವಚನಕಾರ ದೇವರ ದಾಸಿಮಯ್ಯ ಜಯಂತಿ ಉತ್ಸವವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ ಉದ್ಘಾಟಿಸಿ, ‘ದಾಸಿಮಯ್ಯನವರು ಕನ್ನಡದ ಮೊದಲ ವಚನಕಾರರು. ಇವರನ್ನು ವಚನ ಸಾಹಿತ್ಯದ ಆದ್ಯ ವಚನಕಾರ ಎಂದು ಕರೆಯಲಾಗುತ್ತದೆ. ಅಂದಿನ ಕಾಲದ ಜನರಲ್ಲಿ ಇದ್ದ ಮೂಢನಂಬಿಕೆಗಳನ್ನು ಮತ್ತು ಮೇಲು-ಕೀಳು ಎಂಬ ಭೇದಭಾವವನ್ನು ಇವರು ತಮ್ಮ ಸರಳವಾದ ಮಾತುಗಳ ಮೂಲಕ ತಿದ್ದುವ ಕೆಲಸ ಮಾಡಿದರು’ ಎಂದು ಹೇಳಿದರು.

‘ದೇವರಿಗೆ ಜಾತಿ ಇಲ್ಲ, ಭಕ್ತಿಯೇ ಮುಖ್ಯ’ ಎಂದು ಸಾರಿದ ಇವರು, ಹೆಣ್ಣು-ಗಂಡು ಎಂಬ ವ್ಯತ್ಯಾಸ ಮಾಡದೆ ಎಲ್ಲರಿಗೂ ಸಮಾನ ಗೌರವ ಸಿಗಬೇಕು ಎಂದು ಹಂಬಲಿಸಿದ ಕ್ರಾಂತಿಕಾರಿಗಳು ಎಂದು ತಿಳಿಸಿದರು.

‘ವೃತ್ತಿಯಿಂದ ನೇಕಾರರಾಗಿದ್ದ ಇವರು, ಶ್ರಮ ಜೀವನದ ಮಹತ್ವವನ್ನು ಸಾರಿದವರು. ಅಜ್ಞಾನದ ಕತ್ತಲೆಯನ್ನು ಕಳೆದು ಜ್ಞಾನದ ಬೆಳಕನ್ನು ನೀಡುವ ಇವರ ಚಿಂತನೆಗಳು ಸಮಾಜದಲ್ಲಿ ಸಮಾನತೆ ಮತ್ತು ಭಕ್ತಿಯ ಮಾರ್ಗವನ್ನು ತೋರಿವೆ’ ಎಂದರು.

ವಿಶೇಷ ಉಪನ್ಯಾಸ ನೀಡಿದ ಬಸವ ಸೇವಾ ಪ್ರತಿಷ್ಠಾನದ ಅಧ್ಯಕ್ಷೆ ಗಂಗಾಂಬಿಕಾ ಅಕ್ಕ, ‘ಕಲಬುರಗಿ ಜಿಲ್ಲೆಯ ಸುರಪುರ ತಾಲ್ಲೂಕಿನ ಮುದನೂರಿನಲ್ಲಿ ಜನಿಸಿದ ದೇವರ ದಾಸಿಮಯ್ಯನವರು ‘ರಾಮನಾಥ’ ಅಂಕಿತನಾಮದೊಂದಿಗೆ ಸರಳ ಮತ್ತು ವೈಚಾರಿಕವಾಗಿ 176ಕ್ಕೂ ಹೆಚ್ಚು ವಚನಗಳನ್ನು ರಚಿಸಿದ್ದಾರೆ’ ಎಂದು ಹೇಳಿದರು.

‘ಸಮಾನತೆಯ ತತ್ವ ಸಾರಿದ ದಾಸಿಮಯ್ಯನವರು ಪ್ರೀತಿಯೇ ಸಂಪತ್ತು ಎಂದು ಬದುಕಿದ್ದವರು. ತಮ್ಮ ಬದುಕಿನದುದ್ದಕ್ಕೂ ಬೇಟೆಗಾರರು ಸೇರಿದಂತೆ ಅನೇಕರ ಮನಪರಿವರ್ತನೆ ಮಾಡಿದ್ದಾರೆ. ದೇವರ ದಾಸಿಮಯ್ಯನವರ ಪತ್ನಿ ದುಗ್ಗಳೆ ಕೂಡ ಮಹಾಸಾಧ್ವಿ. ಅನ್ಯೋನ್ಯ ದಾಂಪತ್ಯ ಜೀವನ ನಡೆಸುತ್ತಿದ್ದ ಶರಣೆ ಅವರಾಗಿದ್ದರು. ಎಲ್ಲರೂ ದಾಸಿಮಯ್ಯ ಅವರ ವಚನಗಳನ್ನು ಪಠಣ ಮಾಡಬೇಕು. ಅವರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗಬೇಕು’ ಎಂದರು.

ಕಾರ್ಯಕ್ರಮಕ್ಕೂ ಮುನ್ನ ದೇವರ ದಾಸಿಮಯ್ಯನವರ ಭಾವಚಿತ್ರದ ಮೆರವಣಿಗೆ ನಡೆಯಿತು. ನಗರದ ಗಣೇಶ್ ಮೈದಾನದಿಂದ ಪ್ರಾರಂಭಗೊಂಡ ಮೆರವಣಿಗೆ ಹರಳಯ್ಯ ವೃತ್ತ, ಶಿವಾಜಿ ವೃತ್ತ, ಭಗತ್ ಸಿಂಗ್ ವೃತ್ತ, ಬಸವೇಶ್ವರ ವೃತ್ತ, ಡಾ.ಬಿ.ಆರ್. ಅಂಬೇಡ್ಕರ್ ವೃತ್ತ, ರೋಟರಿ ವೃತ್ತದಿಂದ ಸಾಗಿ ಚನ್ನಬಸವ ಪಟ್ಟದೇವರ ರಂಗಮಂದಿರ ತಲುಪಿತು. ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ., ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ, ನಿವೃತ್ತ ಸರ್ಕಾರಿ ನೌಕರರಿಗೆ ಹಾಗೂ ಸಮಾಜಕ್ಕೆ ಕೊಡುಗೆ ನೀಡಿದವರನ್ನು ಸನ್ಮಾನಿಸಲಾಯಿತು.

ಜಿಲ್ಲಾಧಿಕಾರಿ ಕಚೇರಿಯ ಸಹಾಯಕ ನಿರ್ದೇಶಕ ಸೋಮಶೇಖರ್ ಮಡಕಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ರಾಜಶೇಖರ ಒಟಗೆ, ಸಮಾಜದ ಪ್ರಮುಖರಾದ ರಾಮಕೃಷ್ಣ ಸಾಳೆ, ಪ್ರಶಾಂತ್ ಸೇಂದ್ರೆ, ಮಾಧವ ಚೌಡೆಕರ್, ಅಶೋಕ್ ಎಲ್ಲಿ, ನಾಗಪ್ಪ ಜಂಬಗಿ, ಸೋಮಶೇಖರ್ ಅಮಲಾಪುರ, ಕೋಟೆ ವಿಶ್ವನಾಥ್, ಅನುರಾಧ ಚಂದಾ ಸೇರಿದಂತೆ ನೇಕಾರ ಸಮಾಜದವರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-33-1928329801

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.