ಬೀದರ್: ರಾಜ್ಯ ಬಾಲ ಭವನ ಸೊಸೈಟಿ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲ ಭವನ ಸಮಿತಿ ವತಿಯಿಂದ ನಗರದ ಹೌಸಿಂಗ್ ಬೋರ್ಡ್ ಕಾಲೊನಿಯ ಜಿಲ್ಲಾ ಬಾಲ ಭವನದಲ್ಲಿ ಏ. 20 ರಿಂದ ಮೇ 5ರ ವರೆಗೆ ಜಿಲ್ಲಾಮಟ್ಟದ ಮಕ್ಕಳ ಉಚಿತ ಬೇಸಿಗೆ ಶಿಬಿರ ಹಮ್ಮಿಕೊಳ್ಳಲಾಗಿದೆ.

ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳು ಮಕ್ಕಳಿಗೆ ಚಿತ್ರಕಲೆ, ಕರಕುಶಲ ಕಲೆ, ಜೇಡಿ ಮಣ್ಣಿನ ಕಲೆ, ಕರಾಟೆ, ಯೋಗ, ಧ್ಯಾನ, ಸಮೂಹ ನೃತ್ಯ, ನಾಟಕ ಕಲಿಸಿಕೊಡಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಎಂ.ಎಸ್. ಶ್ರೀಧರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿಬಿರ ಪ್ರತಿ ದಿನ ಬೆಳಿಗ್ಗೆ 8 ರಿಂದ ಮಧ್ಯಾಹ್ನ 2ರ ವರೆಗೆ ನಡೆಯಲಿದೆ. 5 ವರ್ಷದಿಂದ 16 ವರ್ಷದ ಒಳಗಿನ ಮಕ್ಕಳು ಪಾಲ್ಗೊಳ್ಳಬಹುದಾಗಿದೆ. ಶಿಬಿರದ ಕುರಿತು ಹೆಚ್ಚಿನ ಮಾಹಿತಿ ಹಾಗೂ ಹೆಸರು ನೋಂದಣಿಗೆ ಜಿಲ್ಲಾ ಬಾಲ ಭವನ ಸಮಿತಿಯ ಕಾರ್ಯಕ್ರಮ ಸಂಯೋಜಕ ಸೂರ್ಯಕಾಂತ ಮೋರೆ (ಮೊ:9113906525) ಅವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-33-675815305

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.