ಬೀದರ್: ‘ಜನರ ದಿಕ್ಕು ತಪ್ಪಿಸುವುದು ಹಾಗೂ ಸುಳ್ಳು ಹೇಳುವುದೇ ಕಾಂಗ್ರೆಸ್‌ನ ಕೆಲಸ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

‘ರಾಜ್ಯದಲ್ಲಿ ಅತಿವೃಷ್ಟಿಯಿಂದ ತೀವ್ರ ನಷ್ಟ ಉಂಟಾಗಿದ್ದಕ್ಕೆ ಕೇಂದ್ರ ಸರ್ಕಾರ ಮೊದಲ ಕಂತಿನ ಪರಿಹಾರವಾಗಿ ₹ 1,200 ಕೋಟಿ ಹಾಗೂ ಎರಡನೇ ಕಂತಾಗಿ ₹ 1,869 ಕೋಟಿ ಒದಗಿಸಿದೆ. ಬೀದರ್ ಜಿಲ್ಲೆಗೆ ರಾಜ್ಯ ಸರ್ಕಾರ ಕೋವಿಡ್ 19 ಸೋಂಕು ನಿಯಂತ್ರಣಕ್ಕೆ ₹ 6 ಕೋಟಿ ಬಿಡುಗಡೆ ಮಾಡಿದೆ’ ಎಂದು ಇಲ್ಲಿಯ ಬಿಜೆಪಿ ಜಿಲ್ಲಾ ಘಟಕದ ಕಚೇರಿಯಲ್ಲಿ ಮಂಗಳವಾರ ಮಾಧ್ಯಮ ಗೋಷ್ಠಿಯಲ್ಲಿ ತಿಳಿಸಿದರು.

‘ಕೇಂದ್ರ ಸರ್ಕಾರ ಸಾಕಷ್ಟು ನೆರವು ಒದಗಿಸಿದರೂ ಕಾಂಗ್ರೆಸ್ ಮುಖಂಡರು ಸುಳ್ಳು ಹೇಳುವುದನ್ನು ನಿಲ್ಲಿಸಿಲ್ಲ’ ಎಂದು ಟೀಕಿಸಿದರು.

‘ಕೋವಿಡ್ 19 ನಿಯಂತ್ರಿಸುವಲ್ಲಿ ಕರ್ನಾಟಕ ದೇಶದಲ್ಲೇ ಉತ್ತಮ ಕೆಲಸ ಮಾಡುತ್ತಿದೆ. ಪ್ರಧಾನಮಂತ್ರಿ ಅವರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಭಿವೃದ್ಧಿ ಹಾಗೂ ಜನ ಕಲ್ಯಾಣಕ್ಕೆ ಬಿಜೆಪಿ ಸರ್ಕಾರ ಬದ್ಧವಾಗಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.