ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌ | ಫೆ.27, 28ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಸುರೇಶ ಚನಶೆಟ್ಟಿ

Published 18 ಫೆಬ್ರುವರಿ 2024, 15:24 IST
Last Updated 18 ಫೆಬ್ರುವರಿ 2024, 15:24 IST
ಅಕ್ಷರ ಗಾತ್ರ

ಬೀದರ್‌: ‘ಬೀದರ್‌ ಜಿಲ್ಲಾ 21ನೇ ಕನ್ನಡ ಸಾಹಿತ್ಯ ಸಮ್ಮೇಳನ ಫೆ.27, 28ರಂದು ನಗರದ ಡಾ.ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ ಚನಶೆಟ್ಟಿ ತಿಳಿಸಿದ್ದಾರೆ.

ಈ ಹಿಂದೆ ಫೆ.3, 4ರಂದು ಸಮ್ಮೇಳನಕ್ಕೆ ದಿನಾಂಕ ನಿಗದಿಪಡಿಸಲಾಗಿತ್ತು. ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿತ್ತು. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಆಯ್ಕೆಯಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಅವರನ್ನು ಈಗಾಗಲೇ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಮಾಡಲಾಗಿದೆ ಎಂದು ಭಾನುವಾರ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಸಮ್ಮೇಳನದ ಅಂಗವಾಗಿ ‘ಸಾಂಸ್ಕೃತಿಕ ನಾಯಕ’ ಎಂಬ ಸ್ಮರಣ ಸಂಚಿಕೆ ಹೊರತರಲಾಗುತ್ತಿದ್ದು, ಆಸಕ್ತರು ಲೇಖನಗಳನ್ನು ಸಂಚಿಕೆಯ ಸಂಪಾದಕ ಬಸವರಾಜ ಬಲ್ಲೂರ ಅವರಿಗೆ ಕಳಿಸಿಕೊಡಬಹುದು ಎಂದು ತಿಳಿಸಿದ್ದಾರೆ.

ಸಮ್ಮೇಳನದಲ್ಲಿ ಭಾಗವಹಿಸುವ ಶಿಕ್ಷಕರು, ಉಪನ್ಯಾಸಕರಿಗೆ ವಿಶೇಷ ಸಾಂದರ್ಭಿಕ ರಜೆ ನೀಡಲು ಆಯಾ ಇಲಾಖೆಯವರು ಒಪ್ಪಿಕೊಂಡಿದ್ದಾರೆ. ಸಮ್ಮೇಳನದಲ್ಲಿ ಜಿಲ್ಲೆಯ ವಿವಿಧ ಲೇಖಕರ ಪುಸ್ತಕಗಳನ್ನು ಹೊರತರಲಾಗುವುದು. ಆಸಕ್ತರು ಪರಿಷತ್ತಿನ ಕೋಶಾಧ್ಯಕ್ಷ ಶಿವಶಂಕರ ಟೋಕರೆ ಅವರನ್ನು ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT