ಸ್ವಸಹಾಯ ಸಂಘಗಳ ಉತ್ಪನ್ನ ಪ್ರದರ್ಶನ
ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ವಸ್ತು ಪ್ರದರ್ಶನದಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಸ್ವಸಹಾಯ ಸಂಘಗಳ ಮಹಿಳೆಯರು, ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವ ಇಲಾಖೆಗಳ ಮಾಹಿತಿಯನ್ನು ಒಳಗೊಂಡ ಪ್ರದರ್ಶನ ಗಮನ ಸೆಳೆಯಿತು. ಕೆಕೆಆರ್‌ಟಿಸಿ ಬೀದರ್ ವಿಭಾಗದಿಂದ ಕಿರು ಬಸ್‌ಗಳ ಮಾದರಿ ಆಕರ್ಷಿಸಿತು. ಸ್ವಸಹಾಯ ಸಂಘದ ಮಹಿಳೆಯರ ಚಕ್ಕುಲಿ, ಉಪ್ಪಿನಕಾಯಿ, ಕರಕುಶಲ ವಸ್ತುಗಳ ಮಾರಾಟವೂ ನಡೆಯಿತು.