ಬೀದರ್: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಅವರು ಮೇ 14 ರಿಂದ 16ರ ವರೆಗೆ ಬೀದರ್ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.

ಮೇ 14ರಂದು ಬೆಳಿಗ್ಗೆ 11ಕ್ಕೆ ಬೀದರ್ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕುಡಿಯುವ ನೀರಿನ ಸಮಸ್ಯೆ, ಶಾಸಕರ ಪ್ರದೇಶಾಭಿವೃದ್ಧಿ ನಿಧಿ, ಲೋಕಸಭಾ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿ ಮತ್ತು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 2 ರಿಂದ ಸಂಜೆ 6ರ ವರೆಗೆ ಬೀದರ್ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಸಂಜೆ 6ಕ್ಕೆ ರಸ್ತೆ ಮೂಲಕ ಭಾಲ್ಕಿಗೆ ಪ್ರಯಾಣಿಸಿ ಅಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ.

ಮೇ 15ರಂದು ಬೆಳಿಗ್ಗೆ 11ಕ್ಕೆ ಬೀದರ್ನ ಸ್ಕೌಟ್ಸ್ ಮತ್ತು ಗೈಡ್ಸ್ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3ರಂದು ಬೀದರ್ನ ಜಾಮೀಯಾ ಮಸೀದಿ ಹತ್ತಿರದ ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5ಕ್ಕೆ ಬೀದರ್ನಿಂದ ರಸ್ತೆ ಮಾರ್ಗವಾಗಿ ಕಲಬುರಗಿಗೆ ತೆರಳಿ ಸಂಜೆ 7ಕ್ಕೆ ಶರಣು ಅಲಗೂಡ್ ಅವರ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 8ಕ್ಕೆ ಕಲಬುರಗಿಯಿಂದ ರಸ್ತೆ ಮೂಲಕ ಭಾಲ್ಕಿಗೆ ಪ್ರಯಾಣಿಸಿ ಅಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ.

ಮೇ 16ರಂದು ಬೆಳಿಗ್ಗೆ 10ಕ್ಕೆ ಹುಲಸೂರಿನಲ್ಲಿ ಆಯೋಜಿಸಿರುವ ಹುಲಸೂರ ವಿದ್ಯುತ್ ಪ್ರಸರಣ ಉಪ ಕೇಂದ್ರದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12.30 ಕ್ಕೆ ಭಾಲ್ಕಿಯಲ್ಲಿ ಆಯೋಜಿಸಿರುವ ಭಾಲ್ಕಿ-ವಿದ್ಯುತ್ ಪ್ರಸರಣ ಉಪ ಕೇಂದ್ರದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-33-66208192

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.