ಬೀದರ್: ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಮಂಗಳವಾರ ಮಳೆಯಾಗಿದೆ.

ಬೆಳಿಗ್ಗೆ 9.30ಕ್ಕೆ ಆರಂಭಗೊಂಡ ಜಿಟಿಜಿಟಿ ಮಳೆ ಅರ್ಧಗಂಟೆಗೂ ಹೆಚ್ಚು ಕಾಲ ಸುರಿಯಿತು. ವಾತಾವರಣ ಸಂಪೂರ್ಣ ತಂಪಾಯಿತು. ಆನಂತರ ಮಧ್ಯಾಹ್ನದಿಂದ ಸಂಜೆಯ ವರೆಗೆ ಬಿಸಿಲು ತೆರೆದುಕೊಂಡಿತು.

ಸೋಮವಾರ ತಡರಾತ್ರಿ ಆರಂಭಗೊಂಡ ಬಿರುಗಾಳಿ ಮಂಗಳವಾರ ಬೆಳಕು ಹರಿಯುವವರೆಗೆ ಮುಂದುವರೆದು, ವಾತಾವರಣ ಸಂಪೂರ್ಣ ತಂಪಾಗಿತ್ತು. ಆನಂತರ ಮಳೆ ಸುರಿಯಿತು. ಬೀದರ್ ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲಿ ಚಿಟಗುಪ್ಪ, ಕಮಲನಗರ ಹಾಗೂ ಔರಾದ್ ತಾಲ್ಲೂಕಿನ ಕೆಲವು ಭಾಗಗಳಲ್ಲಿ ಮಳೆಯಾಗಿರುವುದು ವರದಿಯಾಗಿದೆ. ಔರಾದ್ ತಾಲ್ಲೂಕಿನ ಬಾದಲ್ಗಾಂವ್ ಗ್ರಾಮದಲ್ಲಿ ಸಿಡಿಲಿನಿಂದ ರಾಹುಲ್ ರಮೇಶ್ ಬಾಸ್ಕರೆ (25) ಎಂಬ ಯುವಕ ಮೃತಪಟ್ಟಿದ್ದಾನೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-33-1319398698

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.