ಬೀದರ್: ‘ಪಶು ಸಂಗೋಪನೆ ಇಲಾಖೆಯು 2019ರಲ್ಲಿ ಕೈಗೊಂಡ ಗಣತಿ ಪ್ರಕಾರ ಜಿಲ್ಲೆಯಲ್ಲಿ ಏಳು ಸಾವಿರ ಬೀದಿ ನಾಯಿಗಳಿವೆ. ಆರು ವರ್ಷಗಳಲ್ಲಿ ಅವುಗಳ ಸಂಖ್ಯೆ ಹೆಚ್ಚಿದ್ದು ನಿಯಂತ್ರಣಕ್ಕೆ ಕ್ರಮ ಜರುಗಿಸಬೇಕು’ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಇಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.

ಬೀದಿ ನಾಯಿಗಳ ಹಾವಳಿ ನಿಯಂತ್ರಣ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಬಂಧಿಸಿದ ಅಧಿಕಾರಿಗಳು ಸದ್ಯ ಜಿಲ್ಲೆಯಲ್ಲಿ ಎಷ್ಟು ಬೀದಿ ನಾಯಿಗಳಿವೆ ಎಂಬುದರ ಸಂಖ್ಯೆ ಕೊಡಬೇಕು ಎಂದು ತಿಳಿಸಿದರು.

ಸ್ಥಳೀಯ ಸಂಸ್ಥೆಗಳು ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿರುವ ಬೀದಿ ನಾಯಿಗಳ ಸಂಖ್ಯೆ ಹಾಗೂ ಅವುಗಳಿಗೆ ಒದಗಿಸಲಾಗುವ ಆಶ್ರಯ ತಾಣಗಳ ಪಟ್ಟಿಯನ್ನು ನ.21ರೊಳಗೆ ಸಲ್ಲಿಸಬೇಕು. ಬೀದಿ ನಾಯಿಗಳ ಹಾವಳಿ ನಿಯಂತ್ರಣ ಸಂಬಂಧ ಸುಪ್ರೀಂಕೋರ್ಟ್ ಇತ್ತೀಚಿನ ಆದೇಶದ ಹಿನ್ನೆಲೆಯಲ್ಲಿ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ತಕ್ಷಣವೇ ಬೀದಿ ನಾಯಿಗಳ ನಿಯಂತ್ರಣಕ್ಕೆ ಕಾರ್ಯೋನ್ಮುಖರಾಗಬೇಕು ಎಂದು ನಿರ್ದೇಶನ ನೀಡಿದರು.

ನಾಯಿಗಳ ಹಾವಳಿ ನಿಯಂತ್ರಣಕ್ಕೆ ಸಂಬಂಧಿಸಿದ 15 ಇಲಾಖೆಗಳು ತಮಗೆ ನೀಡಲಾಗುವ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಬೇಕು. ಇದರಲ್ಲಿ ನಗರಸಭೆ ಹಾಗೂ ಗ್ರಾಮ ಪಂಚಾಯಿತಿಗಳು ಮುಖ್ಯ ಪಾತ್ರ ವಹಿಸುತ್ತವೆ ಎಂದರು.

ಸಾರ್ವಜನಿಕ ಕಟ್ಟಡಗಳ ಸುತ್ತ ಆವರಣ ಗೋಡೆ ನಿರ್ಮಿಸಬೇಕು. ಬಸ್ ನಿಲ್ದಾಣದಲ್ಲಿ ಬೀದಿ ನಾಯಿಗಳು ಪ್ರವೇಶಿಸದಂತೆ, ಎಲ್ಲೆಂದರಲ್ಲಿ ತಿನಿಸು ಪದ್ದಾರ್ಥಗಳನ್ನು ಎಸೆಯದಂತೆ ಕ್ರಮ ಕೈಗೊಳ್ಳಬೇಕು. ಶಿಕ್ಷಣ ಇಲಾಖೆಯು ಮಕ್ಕಳಿಗೆ ನಾಯಿ ಕಡಿತ ಆದಾಗ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಬೇಕು. ಆರೋಗ್ಯ ಇಲಾಖೆಯ ಎಲ್ಲೆಡೆ ರೇಬಿಸ್ ಲಸಿಕೆ ಹಾಗೂ ‘ಇಮ್ಯುನೋಗ್ಲೋಬಿನ್’ ಕಡ್ಡಾಯವಾಗಿ ದಾಸ್ತಾನು ಮಾಡಬೇಕು ಎಂದು ತಿಳಿಸಿದರು.

ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್, ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸಂತಾನಹರಣ ಶಸ್ತ್ರಚಿಕಿತ್ಸೆ

ಪಶು ಸಂಗೋಪನೆ ಇಲಾಖೆಯ ಉಪನಿರ್ದೇಶಕ ಬಿ.ನರಸಪ್ಪ ಮಾತನಾಡಿ ಎಂಟು ವಾರಗಳಲ್ಲಿ ಎಲ್ಲಾ ಬೀದಿ ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸಿ ಅವುಗಳನ್ನು ಸೂಕ್ತ ಆಶ್ರಯತಾಣಕ್ಕೆ ಸ್ಥಳಾಂತರಿಸಿ ರೇಬಿಸ್ ಲಸಿಕೆಗಳನ್ನು ಹಾಕಬೇಕಾಗುತ್ತದೆ. ಬೀದರ್ ಮಹಾನಗರ ಪಾಲಿಕೆಗೆ ಸೇರಿದ ಗೋರನಳ್ಳಿ ಗ್ರಾಮದಲ್ಲಿ ಆಶ್ರಯತಾಣ ಗುರುತಿಸಲಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.