ಕಪಲಾಪುರ(ಜನವಾಡ): ಬೀದರ್ ತಾಲ್ಲೂಕಿನ ಕಪಲಾಪುರ(ಎ) ಗ್ರಾಮದಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆ 1961 ಹಾಗೂ ನಿಯಮಗಳು 2004 ರ ಕುರಿತು ಸಾರ್ವಜನಿಕರಿಗೆ ಜಾಗೃತಿ ಹಾಗೂ ಇಲಾಖಾ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ಸೋಮವಾರ ನಡೆಯಿತು.

ವರದಕ್ಷಿಣೆ ಕಿರುಕುಳ, ಬಾಲ್ಯ ವಿವಾಹ, ಭ್ರೂಣ ಹತ್ಯೆ, ಲಿಂಗ ತಾರತಮ್ಯ ಮೊದಲಾದವು ಶಿಕ್ಷಾರ್ಹ ಅಪರಾಧಗಳಾಗಿವೆ ಎಂದು ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ್ ಬನಸೋಡೆ ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಶ್ರೀಧರ ಎಂ.ಎಸ್. ಅವರು, ಇಲಾಖೆಯ ಸಖಿ ಒನ್ ಸ್ಟಾಪ್ ಸೆಂಟರ್, ಸಾಂತ್ವನ ಕೇಂದ್ರ, ಸ್ವಾಧಾರ ಕೇಂದ್ರ, ಮಕ್ಕಳ ಸಹಾಯವಾಣಿ ಕುರಿತು ಮಾಹಿತಿ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ವಿಜಯಲಕ್ಷ್ಮಿ, ವಕೀಲ ಭೀಮಾಶಂಕರ ಅಂಬಲಗಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಾಲಮಣಿ, ಧನರಾಜ ವಗ್ಗೆ, ರೂಪಾ ಎಸ್. ಕೋಟೆಗೌಡರ್ ಇದ್ದರು. ಸಾಲೋಮನ್ ನಿರೂಪಿಸಿದರು. ಸಂಗೀತಾ ಕುಂದೆ ಸ್ವಾಗತಿಸಿದರು. ರೋಮಾ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-33-340579896

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.