ಗೋರನಳ್ಳಿ(ಬಿ) (ಜನವಾಡ): ವಿದ್ಯುತ್ ಸ್ವಾವಲಂಬನೆಗಾಗಿ ಜಿಲ್ಲೆಯಲ್ಲಿ ₹1,100 ಕೋಟಿ ವೆಚ್ಚದ ಬೃಹತ್ ವಿದ್ಯುತ್ ಕಾರಿಡಾರ್ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ಬೀದರ್ ತಾಲ್ಲೂಕಿನ ಗೋರನಳ್ಳಿ (ಬಿ)ಯಲ್ಲಿ 110/11 ಕೆವಿ ವಿದ್ಯುತ್ ಉಪ ಕೇಂದ್ರಕ್ಕೆ ಶನಿವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

₹700 ಕೋಟಿ ವೆಚ್ಚದಲ್ಲಿ 440 ಕೆವಿ ವಿದ್ಯುತ್ ಕೇಂದ್ರ, ₹150 ಕೋಟಿ ವೆಚ್ಚದಲ್ಲಿ 220 ಕೆವಿ ವಿದ್ಯುತ್ ಕೇಂದ್ರ ಹಾಗೂ ₹22 ಕೋಟಿ ವೆಚ್ಚದಲ್ಲಿ 16 ಹೊಸ ವಿದ್ಯುತ್ ಉಪ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದರು.

ಒಂದು ವರ್ಷದ ಒಳಗೆ ಎಲ್ಲ ಕಾಮಗಾರಿಗಳು ಪೂರ್ಣಗೊಳ್ಳಲಿವೆ. ಅದರ ನಂತರ ಜಿಲ್ಲೆಯಲ್ಲಿ ಲೋಡ್ ಶೆಡ್ಡಿಂಗ್, ವಿದ್ಯುತ್ ಟ್ರಿಪ್ ಸಮಸ್ಯೆ ತಗ್ಗಲಿದೆ. ವಿದ್ಯುತ್ ವ್ಯತ್ಯಯ, ಟ್ರಾನ್ಸ್ಫಾರ್ಮರ್ ಸುಟ್ಟು ಹೋಗುವ ಸಮಸ್ಯೆಗಳಿಗೂ ಶಾಶ್ವತ ಪರಿಹಾರ ದೊರೆಯಲಿದೆ ಎಂದು ಹೇಳಿದರು.

ರೈತರು ತಮ್ಮ ಮೂರ್ನಾಲ್ಕು ಎಕರೆ ಜಮೀನಿನಲ್ಲಿ ಒಂದು ಮೆಗಾವ್ಯಾಟ್ ಸೌರ ವಿದ್ಯುತ್/ ಪವನ ವಿದ್ಯುತ್ ಘಟಕ ಸ್ಥಾಪಿಸಬೇಕು. ಈ ಮೂಲಕ ತಮ್ಮ ಪಂಪ್ಸೆಟ್ಗೆ ಉಚಿತ ವಿದ್ಯುತ್ ಪಡೆಯುವ ಜತೆಗೆ ವಿದ್ಯುತ್ ಸರ್ಕಾರಕ್ಕೆ ಮಾರಾಟ ಮಾಡಿ ಆರ್ಥಿಕ ಪ್ರಗತಿ ಕೂಡ ಸಾಧಿಸಬಹುದು ಎಂದರು.

ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಮಾತನಾಡಿ, ವಿದ್ಯುತ್ ಏರಿಳಿತ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಗೋರನಳ್ಳಿ(ಬಿ)ಯಲ್ಲಿ ನೂತನ ವಿದ್ಯುತ್ ಉಪ ಕೇಂದ್ರ ನಿರ್ಮಾಣ ಮಾಡಲಾಗುತ್ತಿದೆ. ಶಹಾಪುರ, ಮಲ್ಕಾಪುರ, ಸುಲ್ತಾನಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಅನುಕೂಲವಾಗಲಿದೆ’ ಎಂದು ತಿಳಿಸಿದರು.

ಕೆಪಿಟಿಸಿಎಲ್ ಕಲಬುರಗಿ ಮುಖ್ಯ ಎಂಜಿನಿಯರ್ ರಾಮಸ್ವಾಮಿ ಎಂ.ಎಲ್, ವೃತ್ತದ ಅಧೀಕ್ಷಕ ಎಂಜಿನಿಯರ್ ರಾಮಚಂದ್ರ ಎಸ್.ಜಿ, ಜೆಸ್ಕಾಂ ಕಲಬುರಗಿ ಮುಖ್ಯ ಎಂಜಿನಿಯರ್ ವೆಂಕಟೇಶ್ ಹಳವಿ, ಕೆಪಿಟಿಸಿಎಲ್ ಕಾರ್ಯನಿರ್ವಾಹಕ ಎಂಜಿನಿಯರ್ ಶಶಿರೇಖಾ ಪಾಟೀಲ, ಜೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ರಮೇಶ ಪಾಟೀಲ, ರೇಣುಕಾ ಟಿ.ಜೆ, ಪ್ರಭು ರೆಡ್ಡಿ, ದಯಾನಂದ, ವೀರಭದ್ರಪ್ಪ ಸಾಲಿಮನಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-33-1785852384

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.