ಬೀದರ್: ಭಾಲ್ಕಿ ಶಾಸಕರು ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಈಶ್ವರ ಬಿ. ಖಂಡ್ರೆ ಅವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ನೂತನ ಸರ್ಕಾರದಲ್ಲಿ ಸಚಿವ ಸ್ಥಾನ ದೊರೆತ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಬುಧವಾರ ಸಂಭ್ರಮ ಆಚರಿಸಿದರು.

ನಗರದ ಅಂಬೇಡ್ಕರ್ ವೃತ್ತದ ಬಳಿ ಜಮಾಯಿಸಿ ಕಾರ್ಯಕರ್ತರು ಪಟಾಕಿಗಳನ್ನು ಸಿಡಿಸಿದರು. ಕಾಂಗ್ರೆಸ್ ಪಕ್ಷಕ್ಕೆ ಜಯವಾಲಿ, ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅವರಿಗೆ ಜಯವಾಗಲಿ, ಸಚಿವ ಈಶ್ವರ ಖಂಡ್ರೆ ಅವರಿಗೆ ಜಯವಾಗಲಿ ಎಂಬ ಘೋಷಣೆ ಹಾಕಿದರು. ಪರಸ್ಪರ ಸಿಹಿ ಹಂಚಿ ಸಂತಸ ಹಂಚಿಕೊಂಡರು.

ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಎಂ.ಎ. ಸಮಿ, ಜಾರ್ಜ್ ಫರ್ನಾಂಡಿಸ್, ಪರ್ವೇಜ್ ಕಮಲ್, ಸುನೀಲ್ ಬಚ್ಚನ್, ಎಂ.ಡಿ. ಮಿಸ್ಬಾ ಅಹೆಮ್ಮದ್, ರವೀಂದ್ರ, ಮುಖಂಡ ಸಂಜಯ್ ಜಾಗೀರದಾರ್, ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಸಂಜುಕುಮಾರ ಡಿ.ಕೆ, ಪರಿಶಿಷ್ಟ ಪಂಗಡ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ರಾಕೇಶ ಕುರುಬಖೇಳಗಿ, ಕಾನೂನು ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಶರಣಪ್ಪ ಶರ್ಮಾ, ಎನ್.ಎಸ್.ಯು.ಐ. ಜಿಲ್ಲಾ ಘಟಕದ ಅಧ್ಯಕ್ಷ ಸಚಿನ್ ಮಲ್ಕಾಪುರೆ, ಜಿಲ್ಲಾ ಸಾಮಾಜಿಕ ಜಾಲತಾಣ ಉಸ್ತುವಾರಿ ಮುಕೇಶ್, ರಮೇಶ ಕಮಠಾಣೆ, ವಿದ್ಯಾ ತೂಗಾವೆ, ರಾಣಿ, ಜ್ಯೋತಿ, ಸುಪ್ರಿತಾ, ತೇಜಮ್ಮ, ಸಂಗೀತಾ, ಪ್ರೇಮಾ ಸೇರಿದಂತೆ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಔರಾದ್: ರಾಜ್ಯದಲ್ಲಿ ನೂತನವಾಗಿ ರಚನೆಯಾದ ಕಾಂಗ್ರೆಸ್ ಸರ್ಕಾರದಲ್ಲಿ ಬೀದರ್ ಜಿಲ್ಲೆಯ ಹೆಮ್ಮೆಯ ನಾಯಕ ಈಶ್ವರ ಬಿ. ಖಂಡ್ರೆ ಅವರಿಗೆ ಮೂರನೇ ಬಾರಿಗೆ ಸಚಿವ ಸ್ಥಾನ ದೊರೆತ ಹಿನ್ನೆಲೆಯಲ್ಲಿ ಬುಧವಾರ ಔರಾದ್ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೇರಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಅಲ್ಲದೆ ಪರಸ್ಪರ ಸಿಹಿ ಹಂಚುವ ಮೂಲಕ ಸಂತಸ ವ್ಯಕ್ತಪಡಿಸಿದರು. ಖಂಡ್ರೆ ಅವರಿಗೆ ಸಚಿವ ಸ್ಥಾನ ದೊರೆತಿರುವುದು ಬೀದರ್ ಜಿಲ್ಲೆಗೆ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಮತ್ತಷ್ಟು ಬಲ ತುಂಬಲಿದೆ ಎಂದು ಕಾರ್ಯಕರ್ತರು ಅಭಿಪ್ರಾಯಪಟ್ಟರು.

ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಚೆನ್ನಪ್ಪ ಉಪ್ಪೆ, ಯುವ ಮುಖಂಡರಾದ ಸುನೀಲಕುಮಾರ ದೇಶಮುಖ, ರಾಮಣ್ಣ ವಡಿಯಾರ್, ಸುಧಾಕರ್ ಕೊಳ್ಳೂರು, ನೆಹರು ಪಾಟೀಲ್, ಅಭಂಗರಾವ್ ಗಡದೆ, ಲಕ್ಷ್ಮಣ ದೇವಕತೆ, ಶರಣಪ್ಪ ಪಾಟೀಲ, ಪ್ರಶಾಂತ್ ಪುಲಾರಿ, ಜಗನ್ನಾಥ ನಿರ್ಮಳೆ, ಚಂದು ಡಿಕೆ, ಸುನಿಲ್ ಮಿತ್ರಾ, ವೈಜಿನಾಥ ಒಡೆಯರ್, ಸೂರ್ಯಕಾಂತ ಕಾಂಬಳೆ, ಶೇಖ್ ಇಸ್ಮಾಯಿಲ್, ಸುಲ್ತಾನ್ ಪಠಾಣ್, ಆನಂದ್ ಕಾಂಬಳೆ, ಸುಭಾಷ್ ಮೇತ್ರೆ ಸೇರಿದಂತೆ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-33-820516387

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.