ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌: ಮಾಜಿ ಶಾಸಕ ಜುಲ್ಫೇಕರ್‌ ಹಾಸ್ಮಿ ನಿಧನ

Last Updated 20 ಏಪ್ರಿಲ್ 2021, 5:06 IST
ಅಕ್ಷರ ಗಾತ್ರ

ಬೀದರ್‌: ಮಾಜಿ ಶಾಸಕ ಜುಲ್ಫೇಕರ್‌ ಹಾಸ್ಮಿ (57) ಅವರು ಮೂತ್ರಪಿಂಡ ವೈಫಲ್ಯದಿಂದಾಗಿ ಮಂಗಳವಾರ ಬೆಳಗಿನ ಜಾವ ಹೈದರಾಬಾದ್‌ನಲ್ಲಿ ನಿಧನರಾದರು.

ಅವರಿಗೆ ಪತ್ನಿ, ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ನಾಲ್ಕು ತಿಂಗಳಿಂದ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು. ಎರಡು ದಿನಗಳ ಹಿಂದೆ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ಹೈದರಾಬಾದ್‌ನ ಆಸರಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಜುಲ್ಫೇಕರ್‌ ಹಾಸ್ಮಿಗೆ ಶ್ರದ್ಧಾಂಜಲಿ ಸಲ್ಲಿಸಲು ನಗರದ ಜಾಮಾ ಮಸೀದಿಯಲ್ಲಿ ಇಂದು (ಮಂಗಳವಾರ) ಮಧ್ಯಾಹ್ನ 1.30 ಗಂಟೆಗೆ ವಿಶೇಷ ಪ್ರಾರ್ಥನೆ ಆಯೋಜಿಸಲಾಗಿದೆ. ಬೀದರ್‌ ತಾಲ್ಲೂಕಿನ ಅಷ್ಟೂರಿನ ಅವರ ಹೊಲದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಹಾಸ್ಮಿ 27ನೇ ವಯಸ್ಸಿನಲ್ಲೇ ರಾಜಕೀಯ ಪ್ರವೇಶ ಮಾಡಿದ್ದರು. 30 ವರ್ಷ ರಾಜಕೀಯದಲ್ಲಿ ಸಕ್ರೀಯವಾಗಿದ್ದರು. 1994ರಲ್ಲಿ ಬಿಎಸ್‌ಪಿಯಿಂದ ಬೀದರ್‌ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. ದಕ್ಷಿಣ ಭಾರತದಲ್ಲಿ ಬಿಎಸ್‌ಪಿ ಖಾತೆ ತೆರೆದ ಮೊದಲ ವ್ಯಕ್ತಿ ಎನ್ನುವ ಶ್ರೇಯಸ್ಸಿಗೆ ಪಾತ್ರರಾಗಿದ್ದರು.

ನಂತರ ಜೆಡಿಎಸ್‌ನಿಂದ ಬೀದರ್‌ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಕೆಲ ವರ್ಷ ಕಾಂಗ್ರೆಸ್‌ನಲ್ಲೂ ಗುರುತಿಸಿಕೊಂಡಿದ್ದರು. ಜನ ಸಾಮಾನ್ಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುತ್ತಿದ್ದರು. ಮೊನಚಾದ ಮಾತು ಹಾಗೂ ವಿವಾದಾತ್ಮಕ ಹೇಳಿಕೆಯಿಂದ ಹೆಚ್ಚು ಪ್ರಸಿದ್ಧಿ ಪಡೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT