ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಬಕಾರಿ ದಾಳಿ: 8 ಪ್ರಕರಣ ದಾಖಲು

Last Updated 7 ಏಪ್ರಿಲ್ 2020, 15:17 IST
ಅಕ್ಷರ ಗಾತ್ರ

ಬೀದರ್: ಅಕ್ರಮ ಅಬಕಾರಿ ಚಟುವಟಿಕೆಗಳನ್ನು ತಡೆಯುವ ದಿಸೆಯಲ್ಲಿ ಅಬಕಾರಿ ಇಲಾಖೆ ಸಿಬ್ಬಂದಿ ಮೂರು ದಿನಗಳ ಅವಧಿಯಲ್ಲಿ ಜಿಲ್ಲೆಯ 85 ಕಡೆಗಳಲ್ಲಿ ದಾಳಿ ನಡೆಸಿ, ಮದ್ಯ, ಬೀಯರ್, ಕಳ್ಳಬಟ್ಟಿ ಸಾರಾಯಿ ಹಾಗೂ ಸೇಂದಿಯನ್ನು ವಶಪಡಿಸಿಕೊಂಡಿದ್ದಾರೆ.

ಒಟ್ಟು ರೂ. 2 ಲಕ್ಷ ಮೌಲ್ಯದ 32 ಲೀಟರ್ ಮದ್ಯ, 113 ಲೀಟರ್ ಬೀಯರ್, 20 ಲೀಟರ್ ಕಳ್ಳಬಟ್ಟಿ ಸಾರಾಯಿ, 5 ಲೀಟರ್ ಸೇಂದಿ ಹಾಗೂ ಮೂರು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. 8 ಪ್ರಕರಣಗಳನ್ನು ದಾಖಲು ಮಾಡಿಕೊಳ್ಳಲಾಗಿದೆ ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಅಬಕಾರಿ ಇಲಾಖೆ ಹಾಗೂ ರವೀಂದ್ರ ಡಿಸ್ಟಿಲರಿ ಪ್ರೈವೇಟ್ ಲಿಮಿಟೆಡ್ ಹಾಗೂ ಬೀದರ್ ಕೆಮಿಕಲ್ ಮತ್ತು ಫಾರ್ಮಾ ಸಹಯೋಗದಲ್ಲಿ ಒಟ್ಟು 700 ಲೀಟರ್ ಹ್ಯಾಂಡ್ ಸ್ಯಾನಿಟೈಸರ್ ಆರೋಗ್ಯ ಇಲಾಖೆಗೆ ನೀಡಲಾಗಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT