ಬೆಳೆ ವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನವಾಗಿದೆ. ಆದರೆ, ನೆಟ್‍ವರ್ಕ್ ಸಮಸ್ಯೆಯಿಂದ ನೋಂದಣಿ ಸಾಧ್ಯವಾಗುತ್ತಿಲ್ಲ. ಸಕಾಲಕ್ಕೆ ಮಳೆಯಾಗದ ಕಾರಣ ಜಿಲ್ಲೆಯ ರೈತರು ತಡವಾಗಿ ಬಿತ್ತನೆ ಮಾಡಿದ್ದಾರೆ. ಕೆಲವರು ಬಿತ್ತನೆಯನ್ನೇ ಮಾಡಿಲ್ಲ. ಇದೀಗ ಅತಿವೃಷ್ಟಿಯಿಂದ ಮೊಳಕೆಗಳು ಹಾಳಾಗಿವೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.