ಬೀದರ್: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ, ತಾಲ್ಲೂಕು ಹಾಗೂ ರಾಜ್ಯ ಮಟ್ಟದ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ತಿಳಿಸಿದ್ದಾರೆ.

ಜಿಲ್ಲಾ ಘಟಕದ ಗೌರವಾಧ್ಯಕ್ಷರಾಗಿ ಸಿದ್ರಾಮಪ್ಪಾ ಆಣದೂರೆ, ಜಿಲ್ಲಾಧ್ಯಕ್ಷರಾಗಿ ಶ್ರೀಮಂತ ಬಿರಾದಾರ, ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಮಹಾನಂದಾ ದೇಶಮುಖ, ಜಿಲ್ಲಾ ಉಪಾಧ್ಯಕ್ಷರಾಗಿ ಶಂಕರೆಪ್ಪಾ ಪಾರಾ ಹಾಗೂ ಸಿದ್ದಣ್ಣಾ ಭೂಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಸ್ವಾಮಿ ಸಿರ್ಸಿ ನೇಮಕ ಮಾಡಲಾಗಿದೆ.

ತಾಲ್ಲೂಕು ಘಟಕಗಳಲ್ಲಿ ಭಾಲ್ಕಿ ಅಧ್ಯಕ್ಷರಾಗಿ ಬಾಬುರಾವ ಜೋಳದಾಬಾಕಾ, ಬಸವಕಲ್ಯಾಣ ಅಧ್ಯಕ್ಷರಾಗಿ ಸುಭಾಷ ರಗಟೆ, ಕಮಲನಗರ ಅಧ್ಯಕ್ಷರಾಗಿ ಪ್ರವೀಣ ಕುಲಕರ್ಣಿ, ಬೀದರ ತಾಲ್ಲೂಕು ಅಧ್ಯಕ್ಷರಾಗಿ ನಾಗಯ್ಯ ಹಿರೇಮಠ, ಹುಮನಾಬಾದ್ ಅಧ್ಯಕ್ಷರಾಗಿ ಸತೀಶ ನನ್ನೂರೆ ಹಾಗೂ ಔರಾದ್ ಅಧ್ಯಕ್ಷರಾಗಿ ಪ್ರಕಾಶ ಬಾವಗೆ ಅವರನ್ನು ಆಯ್ಕೆ ಮಾಡಲಾಗಿದೆ.

ಮಹಿಳಾ ಘಟಕದ ಔರಾದ್ ತಾಲ್ಲೂಕು ಅಧ್ಯಕ್ಷರಾಗಿ ಭಾಗ್ಯಶ್ರೀ ದೇಶಮುಖ, ಭಾಲ್ಕಿ ಮಹಿಳಾ ಘಟಕದ ಅಧ್ಯಕ್ಷರಾಗಿ ಸುವರ್ಣಾ ಬಳತೆ ಹಾಗೂ ಕಾರ್ಯಾಧ್ಯಕ್ಷರಾಗಿ ವನಿತಾ ಮಾಶೆಟ್ಟೆ ಅವರನ್ನು ನೇಮಕ ಮಾಡಲಾಗಿದೆ.

ರಾಜ್ಯ ಸಮಿತಿಗೆ ಚಂದ್ರಶೇಖರ ಜಮಖಂಡೆ ಅವರನ್ನು ರಾಜ್ಯ ಉಪಾಧ್ಯಕ್ಷರಾಗಿ, ಶೋಭಾವತಿ ಅಣ್ಣೆಪ್ಪನವರ್ ಅವರನ್ನು ರಾಜ್ಯ ಮಹಿಳಾ ಘಟಕದ ಕಾರ್ಯದರ್ಶಿಯಾಗಿ ಹಾಗೂ ಶೇಷರಾವ ಕಣಜಿ ಅವರನ್ನು ರಾಜ್ಯ ಪ್ರತಿನಿಧಿಯಾಗಿ ನೇಮಕ ಮಾಡಲಾಗಿದೆ.

ನೂತನ ಪದಾಧಿಕಾರಿಗಳು ರೈತರ ಸಮಸ್ಯೆಗಳ ಪರಿಹಾರ, ಕೃಷಿ ಕ್ಷೇತ್ರದ ಅಭಿವೃದ್ಧಿ ಹಾಗೂ ರೈತರ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡಿ ಕಾರ್ಯನಿರ್ವಹಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

‘ಈ ನೇಮಕಾತಿಗಳಿಗೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅನುಮೋದನೆ ನೀಡಿದ್ದಾರೆ’ ಎಂದು ತಿಳಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-33-1909887516

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.