ಬೀದರ್: ಜೂನ್ 3ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಡಿ.ಕೆ. ಶಿವಕುಮಾರ ಅವರು ಅಧಿಕಾರ ಸ್ವೀಕಾರಕ್ಕೂ ಮುನ್ನವೇ ರಾಜ್ಯದ ರೈತರ ಸಂಪೂರ್ಣ ಸಾಲ ಮನ್ನಾ ಘೋಷಣೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ಒತ್ತಾಯಿಸಿದರು.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ರೈತರು ಬೆಳೆ ನಷ್ಟ, ಸಾಲದ ಹೊರೆ ಹಾಗೂ ಕೃಷಿ ವೆಚ್ಚದ ಏರಿಕೆಯಿಂದ ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಮೂಲಕ ಸರ್ಕಾರ ರೈತಪರ ನಿಲುವು ಪ್ರದರ್ಶಿಸಬೇಕು ಎಂದು ಹೇಳಿದರು.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಡಿ.ಕೆ. ಶಿವಕುಮಾರ ಅವರು ತಮ್ಮ ಮೊದಲ ಆದ್ಯತೆಯಾಗಿ ರೈತರ ಸಾಲ ಮನ್ನಾ ಜಾರಿಗೊಳಿಸಿದರೆ ರಾಜ್ಯದ ರೈತ ಸಮುದಾಯಕ್ಕೆ ದೊಡ್ಡ ನೆರವಾಗಲಿದೆ. ರೈತರ ಸಂಕಷ್ಟ ನಿವಾರಣೆಗೆ ಇದು ಐತಿಹಾಸಿಕ ನಿರ್ಧಾರವಾಗಲಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಮುಂಗಾರು ಹಂಗಾಮು ಆರಂಭವಾಗಿರುವ ಹಿನ್ನೆಲೆಯಲ್ಲಿ ರಸಗೊಬ್ಬರ ಕೊರತೆ ಕಂಡುಬಂದಿದ್ದು, ಪಿಕೆಪಿಎಸ್ಗಳು ಹಾಗೂ ಮಾರುಕಟ್ಟೆಗಳಲ್ಲಿ ಸಮರ್ಪಕ ಪ್ರಮಾಣದಲ್ಲಿ ಗೊಬ್ಬರ ಲಭ್ಯವಾಗುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಎಫ್ಐಡಿ ಸೇರಿದಂತೆ ತಾಂತ್ರಿಕ ಸಮಸ್ಯೆಗಳಿಂದ ರೈತರಿಗೆ ಗೊಬ್ಬರ ವಿತರಣೆಯಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದರು.

ಕಬ್ಬು ಬೆಳೆಗಾರರಿಗೆ ಕಾರ್ಖಾನೆಗಳಿಂದ ಬಾಕಿ ಹಣ ಪಾವತಿಸಬೇಕು ಹಾಗೂ ಜಿಲ್ಲೆಯ ಜೀವನಾಡಿಯಾಗಿರುವ ಬಿ.ಎಸ್.ಎಸ್.ಕೆ. ಸಕ್ಕರೆ ಕಾರ್ಖಾನೆಯನ್ನು ರೈತರು ಮತ್ತು ಕಾರ್ಮಿಕರ ಹಿತದೃಷ್ಟಿಯಿಂದ ಪುನರಾರಂಭಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರೈತ ಮುಖಂಡರಾದ ಬಾಬುರಾವ ಹೊನ್ನಾ, ಬಸವರಾಜ ಅಷ್ಟೂರ, ಶಿವರಾಜ ಪಾಟೀಲ ಅತಿವಾಳ, ವೀರಾರೆಡ್ಡಿ ಪಾಟೀಲ, ಕೋಂಡಿಬಾರಾವ ಪಾಂಡ್ರೆ, ವಿಠಲರೆಡ್ಡಿ ಅಣದೂರು, ಧೂಳಪ್ಪಾ ಸೊರಳೆ, ಶಿವರಾಯ ಮುದಾಳೆ, ಮಲ್ಲಿಕಾರ್ಜುನ ಬಿರಾದಾರ, ಬಾಬುರಾವ ಭೋಸ್ಲೆ, ವಿಶ್ವನಾಥ ಧರಣೆ, ವಿಜಯಕುಮಾರ ಬಾವಗಿ, ನಜೀರ ಅಹ್ಮದ್ ಶಫೀಯೋದ್ದೀನ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-33-1647597243

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.