ಬೀದರ್: ಜಿಲ್ಲೆಯ ರೈತರಿಗೆ ಸಕ್ಕರೆ ಕಾರ್ಖಾನೆಗಳಿಂದ ಬಾಕಿ ಇರುವ ಕಬ್ಬಿನ ಬಿಲ್ಗಳನ್ನು ಸಂಪೂರ್ಣವಾಗಿ ಪಾವತಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬೀದರ್ ಜಿಲ್ಲಾ ಘಟಕವು ಮೇ 15ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಿದೆ.

ಜಿಲ್ಲಾಧಿಕಾರಿ ಅವರು ಏಪ್ರಿಲ್ ಅಂತ್ಯದೊಳಗೆ ಎಲ್ಲಾ ಸಕ್ಕರೆ ಕಾರ್ಖಾನೆಗಳಿಂದ ರೈತರ ಕಬ್ಬಿನ ಬಿಲ್ಗಳನ್ನು ಪಾವತಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಅವಧಿ ಕಳೆದರೂ ಸಹ ರೈತರಿಗೆ ಸಂಪೂರ್ಣ ಹಣ ಪಾವತಿಯಾಗಿಲ್ಲ ಎಂದು ಸಂಘಟನೆ ಆರೋಪಿಸಿದೆ.

ಜಿಲ್ಲೆಯ ಸಮಸ್ತ ರೈತರು ಮೇ 15ರಂದು ಬೆಳಿಗ್ಗೆ 11ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಮೀಪದ ಲಾವಣ್ಯ ಫಂಕ್ಷನ್ ಹಾಲ್ ಹತ್ತಿರ ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಹೋರಾಟ ಯಶಸ್ವಿಗೊಳಿಸಬೇಕೆಂದು ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಸ್ವಾಮಿ ಸಿರ್ಸಿ ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-33-1518407818

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.