ಬೀದರ್: ಜಿಲ್ಲೆಯ ಕಬ್ಬು ಬೆಳೆಗಾರ ಬಾಕಿ ಇರುವ ₹45 ಕೋಟಿ ಹಣವನ್ನು ತಕ್ಷಣ ಪಾವತಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕವು ಜೂನ್ 2ರಂದು ನಗರದ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಿದೆ.

ಜಿಲ್ಲೆಯ ವಿವಿಧ ಸಕ್ಕರೆ ಕಾರ್ಖಾನೆಗಳು ರೈತರ ಹಣ ಇನ್ನೂ ಪಾವತಿಸಿಲ್ಲ. ಮೇ 15ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ರೈತರು ಮುಂದಾಗಿದ್ದರು. ಆಗ ಜಿಲ್ಲಾಧಿಕಾರಿಗಳು ಸ್ವತಃ ರೈತರನ್ನು ಭೇಟಿ ಮಾಡಿ ಮೇ 30ರೊಳಗೆ ರೈತರ ಕಬ್ಬಿನ ಬಾಕಿ ಹಣವನ್ನು ಸಂಪೂರ್ಣ ಪಾವತಿಸುವುದಾಗಿ ಭರವಸೆ ನೀಡಿದ್ದರು. ಜಿಲ್ಲಾಧಿಕಾರಿಗಳ ಭರವಸೆಯನ್ನು ನಂಬಿ ಅಂದು ರೈತರು ಪ್ರತಿಭಟನೆಯನ್ನು ಹಿಂಪಡೆದಿದ್ದರು. ಆದರೆ, ಜಿಲ್ಲಾಧಿಕಾರಿಗಳು ನೀಡಿದ್ದ ಭರವಸೆ ಈಡೇರಿಸಿಲ್ಲ ಎಂದು ಸಂಘದ ಜಿಲ್ಲಾಧ್ಯಕ್ಷ ಶ್ರೀಮಂತ ಬಿರಾದಾರ ಆರೋಪಿಸಿದ್ದಾರೆ.

ಮುಂಗಾರು ಬಿತ್ತನೆ ಸಮಯದಲ್ಲಿ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಹಣದ ಕೊರತೆ ಎದುರಿಸುತ್ತಿದ್ದಾರೆ. ಆದಕಾರಣ ಜೂ.2ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಮೀಪದ ಲಾವಣ್ಯ ಕಲ್ಯಾಣ ಮಂಟಪದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ, ಬಳಿಕ ಕಚೇರಿಗೆ ಮುತ್ತಿಗೆ ಹಾಕಲಾಗುವುದು. ರೈತರ ಕಬ್ಬಿನ ಬಾಕಿ ಹಣ ಪಾವತಿಯಾಗುವವರೆಗೆ ಜಿಲ್ಲಾಧಿಕಾರಿ ಕಚೇರಿಯಿಂದ ತೆರಳುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯ ಎಲ್ಲಾ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-33-428485735

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.