ಬೀದರ್: ಕೇಂದ್ರದ ಮಾಜಿ ಸಚಿವ, ಬಿಜೆಪಿ ಮುಖಂಡ ಭಗವಂತ ಖೂಬಾ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಭಾಲ್ಕಿ ತಾಲ್ಲೂಕಿನ ನಿಟ್ಟೂರ್ (ಬಿ) ಗ್ರಾಮದ ತುಕಾರಾಮ ಹಣಮಂತರಾವ್ ದೊಡ್ಡಿ ವಿರುದ್ಧ ಇಲ್ಲಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕಳೆದ ಶುಕ್ರವಾರ ಪ್ರಕರಣ ದಾಖಲಾಗಿದೆ.

ಸಿಂದಬಂದಗಿ ಗ್ರಾಮದ ರವಿ ನಿಜಾಂಪೂರೆ ಎಂಬುವರು ತುಕಾರಾಮ ದೊಡ್ಡಿ ವಿರುದ್ಧ ಈ ದೂರು ದಾಖಲಿಸಿದ್ದಾರೆ.

‘ಭಗವಂತ ಖೂಬಾ ಅವರ ಬಗ್ಗೆ ನಾಲಾಯಕ, ಕಳ್ಳ, ಕೈಕಾಲು ಕಟ್ಟಿ ಹೊಡಿತಿನಿ, ಬಡಿತಿನಿ ಎಂದು ಜೀವ ಬೆದರಿಕೆ ಹಾಕುವ ವಿಡಿಯೊ ಫೇಸ್ಬುಕ್ ಹಾಗೂ ಇತರೆ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಈ ರೀತಿ ಒಬ್ಬ ನಾಯಕನ ವಿರುದ್ಧ ಬಾಯಿಗೆ ಬಂದಂತೆ ಮಾತನಾಡಿ ಜೀವ ಬೆದರಿಕೆ ಹಾಕಿ ಸಮಾಜದಲ್ಲಿ ಅಶಾಂತಿ ಹಬ್ಬಿಸುವ ವ್ಯಕ್ತಿ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸದರಿ ದೂರನ್ನು ನ್ಯಾಯಾಲಯದ ಅನುಮತಿ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-33-892990602

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.