ಶನಿವಾರ, ಜುಲೈ 31, 2021
21 °C

ಪರಿಶಿಷ್ಟರ ಪಟ್ಟಿಯಿಂದ ನಾಲ್ಕು ಸಮುದಾಯ ಕೈಬಿಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಪರಿಶಿಷ್ಟ ಜಾತಿ ಪಟ್ಟಿಯಿಂದ ಲಂಬಾಣಿ, ಕೊರವಾ, ಕೊರಚಾ ಹಾಗೂ ಭೋವಿ ಸಮುದಾಯಗಳನ್ನು ಕೈಬಿಡಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.

ಸಮಿತಿಯ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದಲ್ಲಿ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌. ಅವರಿಗೆ ಸಲ್ಲಿಸಿದರು.

ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದಾಗ ಲಂಬಾಣಿ, ಭೋವಿ, ಕೊರವಾ ಮತ್ತು ಕೊರಚಾ ಸಮುದಾಯಗಳನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿದ್ದರು. ಇದರಿಂದ ನಿಜವಾದ ಅಸ್ಪೃಷ್ಯರು ಸಾಂವಿಧಾನಿಕ ಹಾಗೂ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುವಂತಾಗಿದೆ ಎಂದು ದೂರಿದರು.

ದೇಶದ ಬೇರೆ ರಾಜ್ಯಗಳಲ್ಲಿ ಈ ನಾಲ್ಕೂ ಸಮುದಾಯಗಳನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಿಲ್ಲ. ರಾಜ್ಯದಲ್ಲಿ ಈ ಸಮುದಾಯಗಳು ನೀರಾವರಿ, ಶಿಕ್ಷಣ, ರಾಜಕೀಯ ಸೇರಿದಂತೆ ಪರಿಶಿಷ್ಟರ ಶೇ 75 ರಷ್ಟು ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿವೆ ಎಂದು ಆರೋಪಿಸಿದರು.

ಸಮಿತಿಯ ಜಿಲ್ಲಾ ಸಂಚಾಲಕ ಉಮೇಶಕುಮಾರ ಸ್ವಾರಳ್ಳಿಕರ್‌, ಜಿಲ್ಲಾ ಸಂಘಟನಾ ಸಂಚಾಲಕ ನರಸಿಂಗ್‌ ಸಾಮ್ರಾಟ್, ದಲಿತ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾ ಸಂಚಾಲಕ ಸಂದೀಪ ಕಾಂಟೆ, ಡಾ. ಬಸವರಾಜ ಉಜ್ವಲೆ, ದಿಲೀಪ ದೊಡ್ಡಮನಿ, ದಯಾನಂದ ನವಲೆ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು