ಬೀದರ್: ರಾಜ್ಯ ಸರ್ಕಾರದಿಂದ ಸ್ವಾತಂತ್ರ್ಯ ಯೋಧರಿಗೆ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ₹10,000 ರಿಂದ ₹20,000ಕ್ಕೆ ಹೆಚ್ಚಿಸಬೇಕು ಎಂದು ರಾಜ್ಯ ಹಿರಿಯ ನಾಗರಿಕರ ಪ್ರಶಸ್ತಿ ಪುರಸ್ಕೃತ ವೀರಭದ್ರಪ್ಪ ಉಪ್ಪಿನ ಅವರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿಯವರಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿಗೆ ಸಲ್ಲಿಸಿದರು.

‘2018ರಿಂದ ಸ್ವಾತಂತ್ರ್ಯ ಯೋಧರಿಗೆ ತಿಂಗಳಿಗೆ ₹10,000 ಗೌರವಧನ ನೀಡಲಾಗುತ್ತಿದ್ದು, ಕಳೆದ ಎಂಟು ವರ್ಷಗಳಿಂದ ಇದರಲ್ಲಿ ಯಾವುದೇ ಪರಿಷ್ಕರಣೆ ಆಗಿಲ್ಲ. ಇದೇ ಅವಧಿಯಲ್ಲಿ ರಾಜ್ಯ ಸರ್ಕಾರದ ವಿವಿಧ ಇಲಾಖೆಯ ನೌಕರರಿಗೆ 6ನೇ ಹಾಗೂ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಹೆಚ್ಚಳ ಮಾಡಿ ಅನುಕೂಲ ಮಾಡಿಕೊಡಲಾಗಿದೆ. ಅಲ್ಲದೆ ಸಚಿವರು, ಸಂಸದರು, ಶಾಸಕರು ಹಾಗೂ ಇತರ ಚುನಾಯಿತ ಪ್ರತಿನಿಧಿಗಳ ಸಂಬಳ ಮತ್ತು ಭತ್ಯೆಗಳನ್ನು ಸಹ ಬೆಲೆ ಸೂಚ್ಯಂಕದ ಆಧಾರದ ಮೇಲೆ ಹೆಚ್ಚಿಸಲಾಗುತ್ತಿದೆ’ ಎಂದು ತಿಳಿಸಿದ್ದಾರೆ.

‘ಆದರೆ, ದಿನೇದಿನೇ ಅಗತ್ಯ ವಸ್ತುಗಳ ಬೆಲೆ, ಆಸ್ಪತ್ರೆ ಹಾಗೂ ಔಷಧ ವೆಚ್ಚಗಳು ಹೆಚ್ಚುತ್ತಿರುವ ಹಿನ್ನೆಲೆ ಸ್ವಾತಂತ್ರ್ಯ ಯೋಧರ ಜೀವನ ನಿರ್ವಹಣೆ ಕಷ್ಟಕರವಾಗುತ್ತಿದೆ. ಹೀಗಾಗಿ ಪ್ರಸ್ತುತ ಪರಿಸ್ಥಿತಿಯನ್ನು ಪರಿಗಣಿಸಿ ಗೌರವಧನವನ್ನು ₹20,000ಕ್ಕೆ ಹೆಚ್ಚಿಸಬೇಕು’ ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ 95 ವರ್ಷದ ಹಿರಿಯ ಸ್ವಾತಂತ್ರ್ಯ ಯೋಧೆ ಸರಸ್ವತಿಬಾಯಿ ಉಪ್ಪಿನ ಹಾಗೂ ಶಿಕ್ಷಕ ರಾಜಶೇಖರ ಉಪ್ಪಿನ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-33-93100287

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.