ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಅಧಿಕಾರಿಗಳಿಗೆ ಶಾಸಕ ರಾಜಶೇಖರ ಪಾಟೀಲ ಸೂಚನೆ
Last Updated 12 ಜೂನ್ 2020, 11:07 IST
ಅಕ್ಷರ ಗಾತ್ರ

ಹುಮನಾಬಾದ್: ‘ಸರ್ಕಾರದ ಅನುದಾನದಲ್ಲಿ ಕೈಗೊಳ್ಳಬೇಕಾದ ಪ್ರತಿಯೊಂದು ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಕಳಪೆ ಎಂದು ಕಂಡುಬಂದರೆ ಸೂಕ್ತ ಕ್ರಮಕೈಗೊಳ್ಳಲಾಗುವುದು’ ಎಂದು ಶಾಸಕ ರಾಜಶೇಖರ ಪಾಟೀಲ ಹೇಳಿದರು.

ಪಟ್ಟಣದ ರಾಮಚಂದ್ರ ವೀರಪ್ಪ ವೃತ್ತದಿಂದ ರಾಷ್ಟ್ರೀಯ ಹೆದ್ದಾರಿ ವರೆಗಿನ ರಸ್ತೆ ಮತ್ತು ಡಾ.ಬಿ.ಆರ್‌.ಅಂಬೇಡ್ಕರ್ ವೃತ್ತದಿಂದ ವಾಂಜಿರಿ ವರೆಗಿನ ರಸ್ತೆ ಸುಧಾರಣೆ ಕಾಮಗಾರಿಗೆ ಶುಕ್ರವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅನುದಾನದ ಅಡಿ ಪಟ್ಟಣದ ಪ್ರವಾಸಿ ಮಂದಿರದಿಂದ ರಾಷ್ಟ್ರೀಯ ಹೆದ್ದಾರಿ ವರೆಗೆ ₹6 ಕೋಟಿ ವೆಚ್ಚದಲ್ಲಿ ರಸ್ತೆ ಅಗಲೀಕರಣ ಸೇರಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಇಲ್ಲಿನ ಡಾ.ಬಿ.ಆರ್‌.ಅಂಬೇಡ್ಕರ್ ವೃತ್ತದಿಂದ ವಾಂಜರಿ ವರೆಗೆ ₹1.14 ಲಕ್ಷದಲ್ಲಿ ರಸ್ತೆ ಸುಧಾರಣೆ ಕಾಮಗಾರಿ ಸೇರಿದಂತೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅನುದಾನದ ಅಡಿ ಈಗಾಗಲೇ ₹15 ಕೋಟಿ ಕಾಮಗಾರಿ ನಡೆಯುತ್ತಿದೆ. ಪ್ರಸಕ್ತ ಸಾಲಿನಲ್ಲಿ ₹43 ಕೋಟಿಯ ಹೂಸ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸ ಲಾಗುತ್ತಿದೆ ಎಂದರು.

ಕೊರೊನಾ ತಡೆಯಲು ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಂಬಂಧಪಟ್ಟ ಪುರಸಭೆ ಸಿಬ್ಬಂದಿ ಕೊರೊನಾ ಕುರಿತು ಜನರಿಗೆ ಅರಿವು ಮೂಡಿಸಬೇಕು. ಮಾಸ್ಕ್ ಧರಿಸದೆ ಇದ್ದರೆ ದಂಡ ವಸೂಲಿ ಮಾಡಬೇಕು ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ ಪಾಟೀಲ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಲಕ್ಷ್ಮಣರಾವ್ ಬುಳ್ಳಾ, ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕಂಟೆಪ್ಪ ದಾನಾ, ತಹಶೀಲ್ದಾರ್ ನಾಗಯ್ಯ ಹಿರೇಮಠ, ಪ್ರಥಮ ದರ್ಜೆ ಗುತ್ತಿಗೆದಾರ ಬಸವರಾಜ ಕೋರಿ ಹಾಗೂ ಮುಖಂಡ ಅಫ್ಸರಮಿಯ್ಯಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT