ಬೀದರ್: ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ (ಸಿಐಟಿಯು ಸಂಯೋಜಿತ) ಜಿಲ್ಲಾ ಸಮಿತಿ ವತಿಯಿಂದ ಜಿ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಸಂಘದ ಪ್ರಮುಖರು ಮಾತನಾಡಿ, ‘ಜಿಲ್ಲೆಯ ಗ್ರಾಮ ಪಂಚಾಯತಿಗಳಲ್ಲಿ ಕರವಸೂಲಿಗಾರರು, ವಾಟರ್ಮೆನ್, ಸಿಪಾಯಿ ಹಾಗೂ ಸ್ವಚ್ಛತಾಗಾರರು ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರೂ, ಸೇವಾ ಜ್ಯೇಷ್ಠತಾಯಲ್ಲಿ ಅನ್ಯಾಯ ನಡೆಯುತ್ತಿದೆ. ಹಿರಿಯ ಸಿಬ್ಬಂದಿ ಕಡೆಗಣಿಸಿ, ಹೊಸದಾಗಿ ಬಂದವರಿಗೆ ಜ್ಯೇಷ್ಠತಾ ಪಟ್ಟಿಯಲ್ಲಿ ಆದ್ಯತೆ ನೀಡಲಾಗುತ್ತಿದೆ’ ಎಂದು ಆರೋಪಿಸಿದರು.

2025–26ನೇ ಸಾಲಿನ ಕರವಸೂಲಿಗಾರರ ಅಂತಿಮ ಜೇಷ್ಠತಾ ಪಟ್ಟಿಯಲ್ಲಿ ತಿದ್ದುಪಡಿ ಮಾಡುವುದು, ಜೇಷ್ಠತಾ ಪಟ್ಟಿ ಸರಿಪಡಿಸುವವರೆಗೆ ಮುಂಬಡ್ತಿ ಹಾಗೂ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸುವುದು, ಅನುಮೋದನೆ ಬಾಕಿ ಉಳಿದ ಸಿಬ್ಬಂದಿಗೆ ಅನುಮೋದನೆ ನೀಡುವುದು. 10ನೇ ತರಗತಿ ಪಾಸಾದ ವಾಟರ್ಮೆನ್ ಸಿಬ್ಬಂದಿಗೆ ಕರವಸೂಲಿಗಾರರು ಹಾಗೂ ಡಿಇಒ ಹುದ್ದೆಗಳಿಗೆ ಮುಂಬಡ್ತಿ ನೀಡಬೇಕು, ಸ್ವಚ್ಛ ವಾಹಿನಿ ಸಿಬ್ಬಂದಿಗೆ ಪ್ರತಿ ತಿಂಗಳು ವೇತನ ಪಾವತಿಸಬೇಕು, ಮರಣ ಹೊಂದಿದ ಅಥವಾ ನಿವೃತ್ತಿ ಪಡೆದ ಸಿಬ್ಬಂದಿ ಕುಟುಂಬ ಸದಸ್ಯರಿಗೆ ಅನುಕಂಪ ಆಧಾರಿತ ನೇಮಕಾತಿ ನೀಡಬೇಕು. ನಿವೃತ್ತಿ ಹೊಂದಿದ ಸಿಬ್ಬಂದಿಗೆ ಉಪದಾನ ವ್ಯವಸ್ಥೆ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಜೀವನ ಕನ್ನಳ್ಳೆ, ಪ್ರಧಾನ ಕಾರ್ಯದರ್ಶಿ ಸಂಗಮೇಶ ಹಿಪ್ಪಳಗಾಂವ, ಪ್ರಭು ಸಂತೋಷಕರ್, ಶ್ರೀದೇವಿ ಚೌಡೆ, ಧನರಾಜ ಗುಳೆ, ವಿಜಯಕುಮಾರ ಜನವಾಡಾ, ಹಾಗೂ ನರಸಿಂಗ ಹಳೆಯೆಂಬರ್ ಸೇರಿದಂತೆ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-33-1852517484

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.