ಭಾಲ್ಕಿ: ತಾಲ್ಲೂಕಿನ ಹಾಲಹಳ್ಳಿ(ಕೆ) ಗ್ರಾಮದಲ್ಲಿ ರೈತರೊಬ್ಬರು ಭಾನುವಾರ ಸಾಲಬಾಧೆ ತಾಳಲಾರದೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೋಮನಾಥ ಕಲ್ಲಪ್ಪ ಲಿಂಗಬಾಶೆಟ್ಟಿ (53) ಆತ್ಮಹತ್ಯೆ ಮಾಡಿಕೊಂಡ ರೈತ. ಮೃತ ರೈತನಿಗೆ ಪತ್ನಿ, ಮೂವರು ಪುತ್ರಿಯರು, ಒಬ್ಬ ಪುತ್ರ ಇದ್ದಾರೆ. ಕಳೆದ ಕೆಲ ವರ್ಷಗಳಿಂದ ಕೃಷಿ ನಿರ್ವಹಣೆಗಾಗಿ ಸ್ವಸಹಾಯ ಸಂಘ ಸೇರಿ ಖಾಸಗಿಯಾಗಿ ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದಾರೆ. ಹೊಲದಲ್ಲಿನ ಬೆಳೆಗಳು ಕೈಕೊಟ್ಟಿದ್ದರಿಂದ ಸಾಲದ ಹೊರೆ ಹೆಚ್ಚುತ್ತಲೇ ಇತ್ತು. ಹೀಗಾಗಿ, ಸಾಲ ತೀರಿಸಲು ಸಾಧ್ಯವಾಗದೇ ಮನೆಯಲ್ಲಿ ಭಾನುವಾರ ನಸುಕಿನ ಜಾವ ಫ್ಯಾನ್ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತ ರೈತನ ಪತ್ನಿ ಸಂಪಾವತಿ ಅವರು ನೀಡಿದ ದೂರಿನ ಮೇರೆಗೆ ಧನ್ನೂರ (ಎಚ್) ಪೊಲೀಸ್ ಠಾಣೆಯಲ್ಲಿ ಪ್ರಕರಣವು ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-33-656816450

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.