ಜನವಾಡ: ಬೀದರ್ ತಾಲ್ಲೂಕಿನ ಹೊಚಕನಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ನೂತನ ಮೂರ್ತಿಯನ್ನು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಗುರುವಾರ ಅನಾವರಣಗೊಳಿಸಿದರು.

‘ಡಾ.ಬಿ.ಆರ್.ಅಂಬೇಡ್ಕರ್ ಅವರು ಮಹಾನ್ ನಾಯಕರು. ಅವರನ್ನು ಯಾವುದೇ ಒಂದು ಸಮುದಾಯಕ್ಕೆ ಸೀಮಿತಗೊಳಿಸಬಾರದು’ ಎಂದು ಅವರು ಹೇಳಿದರು.

‘ಹಳ್ಳಿ ಹಳ್ಳಿಗಳಲ್ಲಿ ಈಗಲೂ ಮೂರ್ತಿಗಳ ರೂಪದಲ್ಲಿ ಡಾ.ಅಂಬೇಡ್ಕರ್ ಅವರನ್ನು ಕಾಣಬಹುದು ಎಂದರು. ಉತ್ತಮ ಸಮಾಜ ನಿರ್ಮಾಣಕ್ಕೆ ಬುದ್ಧ, ಬಸವ ಹಾಗೂ ಡಾ.ಅಂಬೇಡ್ಕರ್ ಅವರ ತತ್ವ, ಸಿದ್ಧಾಂತಗಳನ್ನು ಎಲ್ಲರೂ ಪಾಲಿಸಬೇಕು’ ಎಂದು ಸಲಹೆ ನೀಡಿದರು.

ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷ ಬಿ.ಕೃಷ್ಣಪ್ಪ ಮಾತನಾಡಿ, ‘ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರ ಸಹಕಾರದಿಂದ ಗ್ರಾಮದಲ್ಲಿ ಮೂರ್ತಿ ಸ್ಥಾಪನೆ ಸಾಧ್ಯವಾಗಿದೆ’ ಎಂದು ತಿಳಿಸಿದರು.

ರೇಕುಳಗಿ ಮೌಂಟ್ನ ಅನಾಥ ಪಿಂಡಕ ಬುದ್ಧ ವಿಹಾರದ ಭಂತೆ ಧರ್ಮಪಾಲ್, ಬಸವಕಲ್ಯಾಣ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಗನ್ನಾಥ ರೆಡ್ಡಿ, ಡಾ.ಮಲ್ಲಿಕಾರ್ಜುನ ಸಂಗೋಳಕರ್, ಮುಖಂಡರಾದ ನಸೀಮುದ್ದೀನ್ ಪಟೇಲ್, ಜಯಕುಮಾರ ಕಾಂಗೆ, ಶಿವಾಜಿ ಹಳ್ಳಿಕರ್, ಶಿವಶರಣಪ್ಪ ಹುಗ್ಗಿ ಪಾಟೀಲ, ಖಾಜಾ ಖಲೀಲ್ ಉಲ್ಲಾ, ಖಾಜಾ ಕಲೀಮ್ ಉಲ್ಲಾ ಮೊದಲಾದವರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-33-1521449719

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.