ಬೀದರ್: ನಗರದ ತೋಟಗಾರಿಕೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕದಿಂದ ಶುಕ್ರವಾರ ಅಂತರರಾಷ್ಟ್ರೀಯ ಕಾರ್ಮಿಕರ ದಿನ ಆಚರಿಸಲಾಯಿತು.

ಕಾಲೇಜಿನ ಡೀನ್ ಎಸ್.ವಿ. ಪಾಟೀಲ ಮಾತನಾಡಿ, ‘ಸಮಾಜದ ಅಭಿವೃದ್ಧಿಗೆ ಕಾರ್ಮಿಕರ ಕೊಡುಗೆ ಅತಿ ಮಹತ್ವದ್ದು. ಪ್ರತಿಯೊಬ್ಬ ಕಾರ್ಮಿಕರ ಶ್ರಮದ ಮೌಲ್ಯವನ್ನು ಅರಿತು ಗೌರವಿಸಬೇಕು. ಕಾರ್ಮಿಕರ ಶ್ರಮ ಗೌರವಿಸುವ ಹಾಗೂ ವಿದ್ಯಾರ್ಥಿಗಳಲ್ಲಿ ಶ್ರಮದ ಮಹತ್ವದ ಬಗ್ಗೆ ಜಾಗೃತಿ, ಸಾಮಾಜಿಕ ಜವಾಬ್ದಾರಿಯ ಅರಿವು ಮೂಡಿಸುವ ಉದ್ದೇಶದಿಂದ ಇಂಥ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ’ ಎಂದು ಹೇಳಿದರು.

ವಿದ್ಯಾರ್ಥಿನಿ ಮಧುಮತಿ ಮಾತನಾಡಿ, ‘ಯಾವುದೇ ಕೆಲಸ ಮೇಲು, ಕೀಳಲ್ಲ. ಪ್ರತಿಯೊಂದು ಕೆಲಸಕ್ಕೆ ತನ್ನದೇಯಾದ ಘನತೆ ಮತ್ತು ಮಹತ್ವವಿದೆ’ ಎಂದರು.

ಕಾಲೇಜಿನ ಸಹಾಯಕ ಪ್ರಾಧ್ಯಾಪಕ ವಿಜಯ ಮಹಾಂತೇಶ, ಎಸ್. ಎಮ್. ಪ್ರಸನ್ನ, ಆಂಜನೇಯ ಎನ್. ಅವರು ಶ್ರಮಜೀವಿ ಕಾರ್ಮಿಕರನ್ನು ಸನ್ಮಾನಿಸಿದರು. ಶ್ರೀನಿವಾಸ ಎನ್., ಅರವಿಂದ ರಾಠೋಡ್ ಇದ್ದರು. ವಿದ್ಯಾರ್ಥಿನಿ ಸಾನಿಯಾ ಸ್ವಾಗತಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-33-220613819

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.