ಬೀದರ್: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ನಡೆಸಲಾಗುತ್ತಿರುವ 2026-27ನೇ ಸಾಲಿನ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಸತಿ ನಿಲಯಗಳ ಪ್ರವೇಶಾತಿಗೆ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಮೆಟ್ರಿಕ್ ಪೂರ್ವ ವಸತಿ ನಿಲಯಗಳಿಗೆ 5ನೇ ತರಗತಿಯಿಂದ 10ನೇ ತರಗತಿ ವರೆಗಿನ ವಿದ್ಯಾರ್ಥಿಗಳು ಹಾಗೂ ಮೆಟ್ರಿಕ್ ನಂತರದ ವಸತಿ ನಿಲಯಗಳಿಗೆ ಪಿಯುಸಿ, ಪದವಿ ಹಾಗೂ ವೃತ್ತಿಪರ ಕೋರ್ಸ್ಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಪ್ರವೇಶಾತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶೇ 75ರಷ್ಟು ಹಾಗೂ ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಶೇ 25 ರಷ್ಟು (ಖಾಲಿ ಇರುವ ಸ್ಥಳಗಳಿಗೆ ಮಾತ್ರ) ಮೀಸಲಾತಿ ಇರಲಿದೆ.

ಆಸಕ್ತ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ ಲಿಂಕ್ ಬಳಸಿ, ವಿದ್ಯಾರ್ಥಿ ಲಾಗಿನ್ನಲ್ಲಿ ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳಾದ ವಿದ್ಯಾರ್ಥಿಯ ಎಸ್ಎಸ್ಪಿ ಸ್ಟೂಡೆಂಟ್ ಐಡಿ, ಸ್ಯಾಟ್ಸ್ ಐಡಿ, ಆಧಾರ್ ಕಾರ್ಡ್, ಹಿಂದಿನ ವರ್ಷದ ಅಂಕಪಟ್ಟಿ ಹಾಗೂ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಅನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಪ್ರವೇಶ ಬಯಸುವ ವಸತಿ ನಿಲಯದ ವಾರ್ಡನ್ ಅಥವಾ ಬೀದರ್ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಮೊಬೈಲ್ ಸಂಖ್ಯೆ 9480843082 ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-33-1764949643

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.