ಜನವಾಡ: ಬಿರುಗಾಳಿ ಸಹಿತ ಸುರಿದ ಮಳೆಯಿಂದಾಗಿ ಬೀದರ್ ತಾಲ್ಲೂಕಿನ ಕಮಠಾಣ ಗ್ರಾಮದಲ್ಲಿ ಮನೆಯ ತಗಡಿನ ಚಾವಣಿ ಕುಸಿದು ಬಿದ್ದು ಮಕ್ಕಳು ಸೇರಿ ನಾಲ್ವರು ಗಾಯಗೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ.

ಘಟನೆಯಲ್ಲಿ ಗಾಯಾಳುಗಳನ್ನು ಬೀದರ್ನ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬೀದರ್ ತಹಶೀಲ್ದಾರ್ ರವೀಂದ್ರ ದಾಮಾ ತಿಳಿಸಿದ್ದಾರೆ. ಹೊನ್ನಡ್ಡಿಯಲ್ಲಿ ವಿದ್ಯುತ್ ಕಂಬ ಬಿದ್ದಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಅವರು ಹೇಳಿದ್ದಾರೆ.

ಕುಸಿದ ಕಮಾನು: ಬೀದರ್-ಹುಮನಾಬಾದ್ ಮುಖ್ಯರಸ್ತೆಯಲ್ಲಿ ಬಕ್ಕಚೌಡಿ ಸಮೀಪ ಬೀದರ್ ಮಹಾನಗರ ಪಾಲಿಕೆಯಿಂದ ಅಳವಡಿಸಿದ ಕಮಾನು ಬಿರುಗಾಳಿಯಿಂದ ಕುಸಿದು ಬಿದ್ದಿದೆ. ಇದರಿಂದ ಕೆಲ ಕಾಲ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-33-170339693

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.