ಬೀದರ್ | ವೈಭವದ ಹುಮನಾಬಾದ್ ವೀರಭದ್ರೇಶ್ವರ ರಥೋತ್ಸವ

ಹುಮನಾಬಾದ್ (ಬೀದರ್ ಜಿಲ್ಲೆ): ಕಲ್ಯಾಣ ಕರ್ನಾಟಕದ ಲಕ್ಷಾಂತರ ಭಕ್ತರ ಆರಾಧ್ಯ ದೈವ ಹುಮನಾಬಾದ್
ವೀರಭದ್ರೇಶ್ವರ ರಥೋತ್ಸವ ಸಹಸ್ರಾರು ಭಕ್ತರ ಹರ್ಷೋದ್ಘಾರದ ಮಧ್ಯೆ ವೈಭವದಿಂದ ಜರುಗಿತು.
ಕರ್ನಾಟಕ, ಮಹಾರಾಷ್ಟ್ರ ಹಾಗೂ ತೆಲಂಗಾಣದ ಜಿಲ್ಲೆಗಳಿಂದ ಆಗಮಿಸಿದ್ದ ಭಕ್ತರು ವೀರಭದ್ರೇಶ್ವರನ ದರ್ಶನ ಪಡೆದು ಕೃತಾರ್ಥರಾದರು.
ಮಧ್ಯರಾತ್ರಿ ರಥೋತ್ಸವ ನಡೆಯಿತು. ಭಕ್ತರು ತೇರಿನ ಮೇಲೆ ಉತ್ತತ್ತಿ ಹಾಗೂ ಬತ್ತಾಸು ತೂರಿ ಭಕ್ತಭಾವ ಮೆರೆದರು.
ಮಹಿಳೆಯರು ಮಕ್ಕಳು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ರಥೋತ್ಸವ ದೃಶ್ಯ ವೀಕ್ಷಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.