ಹುಮನಾಬಾದ್ (ಬೀದರ್ ಜಿಲ್ಲೆ): ಮಗಳನ್ನು ಚುಡಾಯಿಸುತ್ತಿದ್ದ ಯುವಕನನ್ನು ಪ್ರಶ್ನಿಸಲು ಆತನ ಮನೆಗೆ ಹೋದ ತಂದೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬುಧವಾರ ತಾಲ್ಲೂಕಿನ ಹಳ್ಳಿಖೇಡ್ ಕೆ. ಗ್ರಾಮದಲ್ಲಿ ನಡೆದಿದೆ.

ಸಂಜುಕುಮಾರ ಮರೆಪ್ಪ ಮೆಲಕೇರಿ (44) ಕೊಲೆಯಾದ ವ್ಯಕ್ತಿ.

‘ಸಂಜುಕುಮಾರ ಅವರ ಮಗಳನ್ನು ಯುವಕ ಅವಿನಾಶ ಚುಡಾಯಿಸುತ್ತಿದ್ದ. ಈ ಬಗ್ಗೆ ವಿಚಾರಿಸಲು ಮನೆಗೆ ಹೋದ ಸಮಯದಲ್ಲಿ ಅವಿನಾಶ ಸಂಜುಕುಮಾರ ಅವರಿಗೆ ಚಾಕುವಿನಿಂದ ಇರಿದಿದ್ದಾನೆ. ತೀವ್ರ ಗಾಯವಾಗಿದ್ದ ಸಂಜುಕುಮಾರ ಅವರನ್ನು ಕಲಬುರಗಿಯ ಜಿಮ್ಸ್ಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಅವಿನಾಶನನ್ನು ಬಂಧಿಸಲಾಗಿದೆ. ಹತ್ತು ಜನರ ವಿರುದ್ಧ ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಎಸ್ಪಿ ಭೇಟಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಹಳ್ಳಿಖೇಡ್ ಕೆ. ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಡಿವೈಎಸ್ಪಿ ಮಡೋಳಪ್ಪ ಪಿ.ಎಸ್, ಸಿಪಿಐ ರವೀಂದ್ರನಾಥ್, ಪಿಎಸ್ಐ ಬಸವಲಿಂಗಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.