ಬೀದರ್: ಜೀವನ ಕೌಶಲ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸಲು ಚೆಸ್ ಸ್ಪರ್ಧೆ ಅತ್ಯಂತ ಸಹಕಾರಿಯಾಗಿದೆ ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು.

ಚೆಸ್ ಅಸೋಶಿಯೇಶನ್ ಹಾಗೂ ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚ್ಯುರಿ ಸಹಯೋಗದಲ್ಲಿ ನಗರದ ರಾಮ ಸಮರ್ಥ ಫಂಕ್ಷನ್ ಹಾಲ್ನಲ್ಲಿ ನಡೆಯುತ್ತಿರುವ ಅಂತರರಾಜ್ಯ ಮಟ್ಟದ ಮುಕ್ತ ಚೆಸ್ ಪಂದ್ಯಾವಳಿಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳ ಬುದ್ಧಿಮತ್ತೆಯನ್ನು ಹೆಚ್ಚಿಸುವುದರ ಜೊತೆಗೆ ಏಕಾಗ್ರತೆಯನ್ನು ಜಾಗೃತಗೊಳಿಸುತ್ತದೆ. ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಬೆಳೆಯಲಿದೆ ಎಂದರು.

ಬೀದರ್ ರಾಮಕೃಷ್ಣ ವಿವೇಕಾನಂದಾಶ್ರಮದ ಜ್ಯೋತಿಮಯಾನಂದ ಸ್ವಾಮಿ ಮಾತನಾಡಿ, ‘ಕಳೆದ ವರ್ಷ ಜನವರಿ 12ರಂದು ಸ್ವಾಮಿ ವಿವೇಕಾನಂದರ ಜಯಂತಿ ದಿನ ಬೀದರ್ ಜನರ ಕೋರಿಕೆಯ ಮೇರೆಗೆ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಚೆಸ್ ಕೋಚಿಂಗ್ ಸೆಂಟರ್ ಆರಂಭಿಸಲಾಗಿದೆ ಎಂದು ತಿಳಿಸಿದರು. ಈ ಕೇಂದ್ರದಲ್ಲಿ ಪ್ರತಿ ಶನಿವಾರ ಸಂಜೆ 4 ಗಂಟೆಯಿಂದ 6 ಗಂಟೆಯವರೆಗೆ ಹಾಗೂ ಭಾನುವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ತರಬೇತಿ ನೀಡಲಾಗುತ್ತಿದೆ. ಬೇಸಿಗೆ ರಜಾದಿನಗಳಲ್ಲಿ ವಾರಪೂರ್ತಿ ಚೆಸ್ ತರಬೇತಿ ಶಿಬಿರಗಳನ್ನು ಆಯೋಜಿಸಲಾಗುವುದು ಎಂದರು.

ಪಂದ್ಯಾವಳಿಯಲ್ಲಿ ಬೀದರ್ ಮಾತ್ರವಲ್ಲದೆ ಇತರ ಜಿಲ್ಲೆಗಳು ಹಾಗೂ ನೆರೆಹೊರೆಯ ರಾಜ್ಯಗಳಿಂದ ಒಟ್ಟು 328 ಸ್ಪರ್ಧಾಳುಗಳು ಹಾಗೂ ಮೂವರು ದೃಷ್ಟಿಹೀನ ಸ್ಪರ್ಧಾಳುಗಳು ಭಾಗವಹಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಪಂದ್ಯಾವಳಿಯ ಅಧ್ಯಕ್ಷ ಡಾ. ಚಂದ್ರಕಾಂತ ಕುಲಕರ್ಣಿ, ಬೀದರ್ ಚೆಸ್ ಅಸೋಶಿಯೇಶನ್ ಅಧ್ಯಕ್ಷ ನಿತಿನ್ ಕರ್ಪೂರ್, ಕಾರ್ಯದರ್ಶಿ ಸತೀಶ ಸ್ವಾಮಿ, ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚ್ಯುರಿ ಅಧ್ಯಕ್ಷ ನಾಗೇಶ ಪಾಟೀಲ, ರಾಜಕುಮಾರ ಅಳ್ಳೆ, ಹಾವಶೆಟ್ಟಿ ಪಾಟೀಲ್, ವಿಕ್ರಮ ತಗಾರೆ, ರಾಹುಲ್ ಅಟ್ಟಲ್, ಡಾ. ಮಲ್ಲಿಕಾರ್ಜುನ ಚಟನಳ್ಳಿ, ಡಾ. ರಘು ಕೃಷ್ಣಮೂರ್ತಿ, ಡಾ. ಆರತಿ ರಘು, ಸಚ್ಚಿದಾನಂದ ಚಿದ್ರೆ, ನಿತಿನ್ ಗೋಯಲ್, ಕೊಟರಕಿ, ಶಾಹೀನ ಪಟೇಲ್, ಗಣಜಾನ್ ಡಿ. ಪೋಕಲ್ವಾರ್ ಸೇರಿದಂತೆ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.