ಬೀದರ್: ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ಆಯೋಜಿಸಿರುವ ಜನಜಾತೀಯ ಗರಿಮಾ ಉತ್ಸವ 2026, ಜನ ಭಾಗಿದಾರಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಚಾಲನೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿರುವ ಅಭಿಯಾನ ಮೇ 25ರ ವರೆಗೆ ನಡೆಯಲಿದೆ. ಬುಡಕಟ್ಟು ಸಮುದಾಯಗಳ ಸಬಲೀಕರಣ, ಬುಡಕಟ್ಟು ಪರಂಪರೆಯ ಶ್ರೀಮಂತಿಕೆ ಹೆಚ್ಚಿಸುವುದು, ಬುಡಕಟ್ಟು ಜನರ ಹಕ್ಕುಗಳನ್ನು ಖಾತ್ರಿಪಡಿಸುವುದು ಈ ಅಭಿಯಾನದ ಮೂಲ ಧ್ಯೇಯವಾಗಿದೆ ಎಂದು ಶಿಲ್ಪಾ ಶರ್ಮಾ ಹೇಳಿದರು.

ಜಿಲ್ಲಾ, ತಾಲ್ಲೂ ಮಟ್ಟದ ಮತ್ತು ನೋಡಲ್ ಅಧಿಕಾರಿಗಳು ಕ್ಷೇತ್ರ ಚಟುವಟಿಕೆ, ಜನಸ್ಪಂದನ, ಜಾಗೃತಿ ಮೂಡಿಸುವುದು, ಗ್ರಾಮ ವಾಸ್ತವ್ಯ, ಹಕ್ಕುಗಳ ಪರಿಹಾರ ಸೇರಿದಂತೆ ವಿವಿಧ ಚಟುವಟಿಕೆಗಳ ಮೂಲಕ ಸರ್ಕಾರದ ಯೋಜನೆಗಳನ್ನು ಬುಡಕಟ್ಟು ಸಮುದಾಯದವರಿಗೆ ತಲುಪಿಸಬೇಕೆಂದು ತಿಳಿಸಿದರು.

ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಕಾರ್ಯಕ್ರಮದಡಿ ಜನ ಭಾಗಿದಾರಿ ಸಬ್ಸೆ ದೂರ್, ಸಬ್ಸೆ ಪೆಹೆಲೆ ಕ್ಯಾಂಪ್ ಅಭಿಯಾನವನ್ನು ಅನುಷ್ಠಾನಗೊಳಿಸಲು ಹಲವು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ಗ್ರಾಮ ಮಟ್ಟದಲ್ಲಿ ಶಿಬಿರ ನಡೆಸುವುದು, ಆರೋಗ್ಯ ಆಹಾರ ಪಂಚಾಯತ್ ರಾಜ್, ಗ್ರಾಮೀಣಾಭಿವೃದ್ಧಿ, ಸಾಮಾಜಿಕ ನ್ಯಾಯ, ಕೃಷಿ, ಭೂಮಾಪನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇರಿದಂತೆ ಸಂಬಂಧಿಸಿದ ಇಲಾಖೆಗಳೊಂದಿಗೆ ಸಹಯೋಗವನ್ನು ಸಾಧಿಸುವುದರ ಮೂಲಕ ಈ ಕಾರ್ಯಕ್ರಮ ಅನುಷ್ಠಾನ ಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಯೋಜನೆಯ ಮೂಲಕ ಬುಡಕಟ್ಟು ಸಮುದಾಯದವರಿಗೆ ಮೂಲಸೌಲಭ್ಯಗಳನ್ನು ಒದಗಿಸಬೇಕು. ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹಧನ, ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 6ನೇ ತರಗತಿವರೆಗೆ ಪ್ರತಿಷ್ಠಿತ ಶಾಲೆಗೆ ಪ್ರವೇಶ, ಕ್ರೈಸ್ ವಸತಿ ಶಾಲೆಗಳಿಗೆ ಎಸ್ಟಿ ಕೃಷಿಕರ ಮಕ್ಕಳಿಗೆ ಕೃಷಿ ಇಲಾಖೆಯಿಂದ ಶಿಷ್ಯ ವೇತನ, ಕಾರ್ಮಿಕರ ಮಕ್ಕಳಿಗೆ ಕಾರ್ಮಿಕ ಇಲಾಖೆಯಿಂದ ಶಿಷ್ಯ ವೇತನ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಆಯುಷ್ಮಾನ್ ಭಾರತ್ ಕಾರ್ಡ್, ಜಾತಿ ಪ್ರಮಾಣ ಪತ್ರ, ನಿವಾಸ ಪ್ರಮಾಣ ಪತ್ರ, ವಿಮಾ ಹಕ್ಕುಗಳು, ಜನಧನ ಬ್ಯಾಂಕ್ ಖಾತೆ, ವೃದ್ಧಾಪ್ಯ ವೇತನ, ಪಿಂಚಣಿ, ವಿಧವಾ ಪಿಂಚಣಿ, ದಿವ್ಯಾಂಗ ಪಿಂಚಣಿ, ಉದ್ಯೋಗ ಮತ್ತು ಜೀವನೋಪಾಯ ಯೋಜನೆಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಪಿಎಂ ಮಾತೃ ವಂದನಾ ಯೋಜನೆಗಳು, ಲಸಿಕಾಕರಣ, ಅನಿಮಿಯಾ ಕುರಿತು ಜಾಗೃತಿ ಮತ್ತು ತಪಾಸಣೆ ಮಾಡಬೇಕು ಎಂದು ಹೇಳಿದರು.

ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಗಿರೀಶ್ ರಂಜೋಳಕರ್ ಮಾತನಾಡಿ, ಇದೊಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಹತ್ವಕಾಂಕ್ಷಿ ಯೋಜನೆಯಾಗಿದೆ. ಅಧಿಕಾರಿಗಳು ತಪ್ಪದೇ ಫಲಾನುಭವಿಗಳ ಮನೆ ಮನೆಗೆ ತೆರಳಿ ಸರ್ಕಾರದ ಯೋಜನೆ ಕುರಿತು ಜಾಗೃತಿ ಮೂಡಿಸಿ ತನ್ಮೂಲಕ ಯೋಜನೆಗಳನ್ನು ಅವರಿಗೆ ತಲುಪಿಸಿ ಸಬಲೀಕರಣಗೊಳಿಸಬೇಕು ಎಂದರು.

ದೇವಿದಾಸ್ ಜೋಶಿ ನಿರೂಪಿಸಿ, ವಂದಿಸಿದರು. ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-33-2029767474

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.