ಜನವಾಡ: ಬೀದರ್ ತಾಲ್ಲೂಕಿನ ಜನವಾಡ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸಾಹಿತ್ಯರತ್ನ ಅಣ್ಣಾಭಾವು ಸಾಠೆ ಸಾಂಸ್ಕೃತಿಕ, ಸಾಹಿತ್ತಿಕ ಲೋಕಮಂಚ್ ಟ್ರಸ್ಟ್ ವತಿಯಿಂದ ಪ್ರಸಕ್ತ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸಾಧನೆಗೈದ 58 ವಿದ್ಯಾರ್ಥಿಗಳಿಗೆ ಮಂಗಳವಾರ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು.

ಟ್ರಸ್ಟ್ ಅಧ್ಯಕ್ಷ ಎಂ.ಎಸ್. ಮನೋಹರ ಅವರು ವಿದ್ಯಾರ್ಥಿಗಳಿಗೆ ಶಾಲು ಹೊದಿಸಿ, ಪದಕ ಹಾಗೂ ಪ್ರಶಂಸಾ ಪತ್ರ ಪ್ರದಾನ ಮಾಡಿದರು.

ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ ಎಂದು ಹೇಳಿದರು.

ಶಾಲೆಯ ಮುಖ್ಯಶಿಕ್ಷಕ ಗೋಪಾಲರಾವ್ ಪಡವಲಕರ್ ಮಾತನಾಡಿ, ಶಾಲೆ ಈ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100 ರಷ್ಟು ಫಲಿತಾಂಶ ಗಳಿಸಿದೆ ಎಂದರು.

ಟ್ರಸ್ಟ್ ಕಾರ್ಯದರ್ಶಿ ಪ್ರವೀಣಚಂದ್ರ ಮೀರಾಗಂಜಕರ್, ಜಂಟಿ ಕಾರ್ಯದರ್ಶಿ ಮನೋಹರ ಮಿರ್ಜಾಪುರಕರ್, ಎಸ್ಡಿಎಂಸಿ ಅಧ್ಯಕ್ಷ ಶಿವಾಜಿ ಪಾಂಡ್ರೆ, ಉಪಾಧ್ಯಕ್ಷೆ ಗೀತಾ ಠಾಕೂರ್, ಪಿಕೆಪಿಎಸ್ ಉಪಾಧ್ಯಕ್ಷ ರಾಜಕುಮಾರ ಪಾಂಡ್ರೆ, ಗ್ರಾಮ ಪಂಚಾಯಿತಿ ಸದಸ್ಯ ಗಣಪತಿ ಇದ್ದರು.

ಶಿಕ್ಷಕ ತಾನಾಜಿ ನರೋಟೆ ಸ್ವಾಗತಿಸಿದರು. ಶಶಿಕಾಂತ ಹೆಗಡೆ ನಿರೂಪಿಸಿದರು. ವಿಜಯಕುಮಾರ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-33-1453026856

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.