ಬೀದರ್: ‘ಏ.16ರಂದು ಕಲಬುರಗಿಯಲ್ಲಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಂಡಿದ್ದು, ಜಿಲ್ಲೆಯ ಯುವಕ/ಯುವತಿಯರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಕೌಶಾಲಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ವತಿಯಿಂದ ಹಮ್ಮಿಕೊಂಡಿರುವ ಉದ್ಯೋಗ ಮೇಳದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ವಿದ್ಯಾವಂತ ನಿರುದ್ಯೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಲಾಭ ಪಡೆದುಕೊಳ್ಳಬೇಕು. ಏ.10ರೊಳಗೆ ಆನ್ಲೈನ್ನಲ್ಲಿ ಹೆಸರು ನೋಂದಣಿ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಈಗಾಗಲೇ ಜಿಲ್ಲೆಯಲ್ಲಿ 745 ಅಭ್ಯರ್ಥಿಗಳು ಹೆಸರು ನೋಂದಣಿ ಮಾಡಿಸಿದ್ದಾರೆ. ಉದ್ಯೋಗ ಮೇಳದಲ್ಲಿ ಒಟ್ಟು 201 ಕಂಪನಿಗಳು ಭಾಗವಹಿಸುತ್ತಿವೆ. ಜಿಲ್ಲೆಯ ಗ್ರಾಮ ಪಂಚಾಯಿತಿ, ಪ್ರಮುಖ ಜನನಿಬಿಡ ಸ್ಥಳ, ಕಾಲೇಜುಗಳಲ್ಲಿ ಪ್ರಚಾರ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ಎಸ್.ಎಸ್.ಎಲ್.ಸಿ., ಐಟಿಐ, ಡಿಪ್ಲೊಮಾ, ಪದವಿ ಹಾಗೂ ಸ್ನಾತಕೋತ್ತರ ಪದವಿ ಹೊಂದಿರುವ ನಿರುದ್ಯೋಗ ಯುವಕ/ಯುವತಿಯರು ಭಾಗವಹಿಸಬಹುದು. ಆಸಕ್ತರು www.skillconnect.koushalkar. comನಲ್ಲಿ ಹೆಸರು ನೋಂದಣಿ ಮಾಡಿಸಬೇಕು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ: 080–22075030 ಸಂಪರ್ಕಿಸಬಹುದು. ಬೀದರ್ ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಮಹೇಶ ಎಂ.ಅವರ ಮೊ. 9900978971 ಸಂಖ್ಯೆಗೆ ಕರೆ ಮಾಡಬಹುದು ಎಂದು ತಿಳಿಸಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಕಾಂತ ಶಹಾಬಾದಕರ್, ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ದೇವೇಂದ್ರ ಹಂಚಿ, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿಗಳು, ವಿವಿಧ ಕಾಲೇಜಿನ ಪ್ರಾಂಶುಪಾಲರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.