ಬೀದರ್: ಬಸವಾದಿ ಶರಣರ ಕರ್ಮಭೂಮಿ ಕಲ್ಯಾಣದ ನೆಲದಲ್ಲಿ ಬರೋಬ್ಬರಿ ಎರಡು ದಶಕಗಳ ನಂತರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಮ್ಮೇಳನ ಆಯೋಜಿಸಿದ್ದು, ಪತ್ರಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ.

ಈ ಹಿಂದೆ 2007ರ ಮೇ 24ರಂದು ಬೀದರ್ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಸಮ್ಮೇಳನ ಏರ್ಪಡಿಸಲಾಗಿತ್ತು. 28ನೇ ರಾಜ್ಯ ಸಮ್ಮೇಳನವು ನಗರದ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ನಡೆದಿತ್ತು. ಅಂದಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಮ್ಮೇಳನ ಉದ್ಘಾಟಿಸಿದ್ದರು. ಆ ಸಮ್ಮೇಳನದಲ್ಲೇ ಪತ್ರಿಕಾ ಭವನದ ಅಡಿಗಲ್ಲು ಸಮಾರಂಭ ಕೂಡ ನಡೆದಿತ್ತು. ₹25 ಲಕ್ಷ ಅನುದಾನ ಕೂಡ ಘೋಷಿಸಲಾಗಿತ್ತು. ಜಿಲ್ಲೆಯ ಹಿರಿಯ ಪತ್ರಕರ್ತರಾದ ದಿವಂಗತ ಕಮಲಾಕರ ಜೋಶಿ, ಕಾಜಿ ಅರ್ಷದ್ ಅಲಿ, ಅಬ್ದುಲ್ ಹಮೀದ್ ಸಾಬ್, ಕೈಸರ್ ರೆಹಮಾನ್ ಅವರನ್ನು ಸನ್ಮಾನಿಸಲಾಗಿತ್ತು. ಪತ್ರಿಕಾ ಲೋಕಕ್ಕೆ ಹಿರಿದಾದ ಕೊಡುಗೆ ನೀಡಿರುವ ಇವರೆಲ್ಲ ಈಗ ನಮ್ಮ ನಡುವೆ ಇಲ್ಲ. ಆದರೆ, ಅದೇ ಕಾರ್ಯಕ್ರಮದಲ್ಲಿ ಗೌರವಕ್ಕೆ ಪಾತ್ರರಾಗಿದ್ದ ಹಿರಿಯ ಪತ್ರಕರ್ತರಾದ ಗಂಧರ್ವ ಸೇನಾ, ಮಾರುತಿ ಬಾವಿದೊಡ್ಡಿ ಅವರು ಈಗಲೂ ಪತ್ರಿಕಾ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ.

ಸಂಘದ ಅಂದಿನ ಜಿಲ್ಲಾ ಅಧ್ಯಕ್ಷ ಬಸವರಾಜ ಕಾಮಶೆಟ್ಟಿ ಅವರ ನೇತೃತ್ವದಲ್ಲಿ ಸಮ್ಮೇಳನ ನಡೆದಿತ್ತು. ಪತ್ರಕರ್ತರ ಸಮಸ್ಯೆ–ಸವಾಲುಗಳು, ತಂತ್ರಜ್ಞಾನ ಸೇರಿದಂತೆ ಹಲವು ವಿಷಯಗಳ ಮೇಲೆ ಸಮ್ಮೇಳನ ಬೆಳಕು ಚೆಲ್ಲುವ ಕೆಲಸ ಮಾಡಿತ್ತು. 2007ರ ಬಳಿಕ ಮತ್ತೊಂದು ಸಮ್ಮೇಳನಕ್ಕೆ ಜಿಲ್ಲೆ ಸಾಕ್ಷಿಯಾಗಲಿದೆ.

ಶರಣ-ಸೂಫಿ ನೆಲದಲ್ಲಿ ಪತ್ರಕರ್ತರ ಜಾತ್ರೆ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಎರಡು ದಿನಗಳ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನಕ್ಕೆ ಬಸವಾದಿ ಶರಣರ ಕರ್ಮಭೂಮಿ, ಸೂಫಿ-ಸಂತರ ನಾಡು ಬೀದರ್ ಸರ್ವ ರೀತಿಯಲ್ಲೂ ಸಜ್ಜುಗೊಂಡಿದೆ.

ನಗರದ ನಾವದಗೇರಿಯ ಝೀರಾ ಕನ್ವೆನ್ಶನ್ ಹಾಲ್ನಲ್ಲಿ ಪ್ರಧಾನ ವೇದಿಕೆ ಸಿದ್ಧಗೊಂಡಿದ್ದು, ಬ್ಯಾನರ್, ಕಟೌಟ್, ಫ್ಲೆಕ್ಸ್ಗಳು ಗಮನ ಸೆಳೆಯುತ್ತಿವೆ. ನಗರದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಎಲ್ಲೆಡೆ ಸಮ್ಮೇಳಕ್ಕೆ ಸ್ವಾಗತ ಕೋರುವ ಕಟೌಟ್ ರಾರಾಜಿಸುತ್ತಿವೆ. ಪತ್ರಕರ್ತರಲ್ಲಿ ಸಡಗರ, ಸಂಭ್ರಮ ಮನೆ ಮಾಡಿದೆ.

ಸಕಲ ಸಿದ್ಧತೆ ಪೂರ್ಣಗೊಂಡಿದೆ. ನೋಂದಣಿ, ಪ್ರದರ್ಶನ ಮಳಿಗೆಗಳು, ಪತ್ರಕರ್ತರಿಗೆ ಊಟ, ಕುಡಿಯುವ ನೀರು ಸೇರಿದಂತೆ ಎಲ್ಲ ಸಿದ್ಧತೆಗಳು ಆಗಿವೆ. ಹಿರಿಯರು ಹಾಗೂ ಮಾಜಿ ಜಿಲ್ಲಾ ಅಧ್ಯಕ್ಷರ ಸಲಹಾ ಸಮಿತಿ, ಸಮ್ಮೇಳನ ಪೋಷಕರು, ವಸತಿ, ಆಹಾರ, ಸಾರಿಗೆ, ಪ್ರಚಾರ, ಮೆರವಣಿಗೆ, ಪ್ರತಿನಿಧಿಗಳ ನೋಂದಣಿ- ಕಿಟ್ ವಿತರಣೆ, ಛಾಯಾಚಿತ್ರ ಪ್ರದರ್ಶನ, ವಸ್ತು ಪ್ರದರ್ಶನ-ಮಾರಾಟ ಮಳಿಗೆ, ಸಾಂಸ್ಕೃತಿಕ, ಮಹಿಳಾ, ಆರೋಗ್ಯ, ಅತಿಥಿ ಸತ್ಕಾರ, ಸ್ಮರಣ ಸಂಚಿಕೆ ಮುದ್ರಣ, ಪ್ರವಾಸ ಹಾಗೂ ಶಿಸ್ತು ಪಾಲನೆ ಮತ್ತು ಸ್ವಯಂ ಸೇವಕರ ಸಮಿತಿಗಳು ಅರ್ಥಪೂರ್ಣ ಸಮ್ಮೇಳನಕ್ಕೆ ಅಗತ್ಯ ತಯಾರಿ ಮಾಡಿಕೊಳ್ಳಲಾಗಿದೆ.

ರಾಜ್ಯದ ವಿವಿಧ ಭಾಗಗಳ ಒಟ್ಟಾರೆ ಐದು ಸಾವಿರಕ್ಕೂ ಹೆಚ್ಚು ಪತ್ರಕರ್ತರು ಸಮ್ಮೇಳನದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. ಸಮ್ಮೇಳನಕ್ಕೆ ಆಗಮಿಸುವ ಪತ್ರಕರ್ತರಿಗೆ ವಸತಿ, ಸಾರಿಗೆ, ಆಹಾರ ಸೇರಿದಂತೆ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಸಮ್ಮೇಳನದಲ್ಲಿ ನೋಂದಣಿ ಸೇರಿ 22 ಮಳಿಗೆಗಳು ಇರಲಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-33-1693711891

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.