ಬೀದರ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನದ ಅಂಗವಾಗಿ ಏ. 11ರಂದು ನಗರದಲ್ಲಿ ಅದ್ದೂರಿ ಮೆರವಣಿಗೆ ನಡೆಸಲು ಸಮ್ಮೇಳನ ಮೆರವಣಿಗೆ ಸಮಿತಿ ನಿರ್ಧರಿಸಿದೆ.

ನಗರದಲ್ಲಿ ನಡೆದ ಸಮ್ಮೇಳನ ಮೆರವಣಿಗೆ ಸಮಿತಿಯ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಯಿತು.

ಅಂದು ಬೆಳಿಗ್ಗೆ ನಗರದ ಬಸವೇಶ್ವರ ವೃತ್ತದಿಂದ ಭಗತ್ಸಿಂಗ್ ವೃತ್ತ, ಅಂಬೇಡ್ಕರ್ ವೃತ್ತ, ಸಿದ್ಧಾರ್ಥ ಕಾಲೇಜು ಮಾರ್ಗವಾಗಿ ಸಮ್ಮೇಳನ ಸ್ಥಳವಾದ ಝೀರಾ ಕನ್ವೆನ್ಶನ್ ಹಾಲ್ವರೆಗೆ ಮೆರವಣಿಗೆ ಜರುಗಲಿದೆ ಎಂದು ಸಮಿತಿಯ ಪ್ರಮುಖರು ತಿಳಿಸಿದರು.

ಮೆರವಣಿಗೆಯಲ್ಲಿ ಅಲಂಕೃತ ರಥದಲ್ಲಿ ಸಮ್ಮೇಳನದ ಲೋಗೋ ಇರಲಿದೆ. ಬೀದರ್ ಸೇರಿ ವಿವಿಧ ಜಿಲ್ಲೆಗಳ ಕಲಾ ತಂಡಗಳು ಮೆರವಣಿಗೆಯ ವೈಭವ ಹೆಚ್ಚಿಸಲಿವೆ ಎಂದು ಹೇಳಿದರು.

ಮೆರವಣಿಗೆ ಮಾರ್ಗದಲ್ಲಿ ಸಂಘ ಸಂಸ್ಥೆಗಳು, ಪುಷ್ಪವೃಷ್ಟಿ ಮಾಡಿ ಮೆರವಣಿಗೆಯನ್ನು ಸ್ವಾಗತಿಸಿ ಬರಮಾಡಿಕೊಳ್ಳಲಿವೆ ಎಂದು ತಿಳಿಸಿದರು.

ಸಮ್ಮೇಳನದಲ್ಲಿ ಪಾಲ್ಗೊಳ್ಳಲು ರಾಜ್ಯದ ವಿವಿಧೆಡೆಯಿಂದ ನಗರಕ್ಕೆ ಆಗಮಿಸುವ ಪತ್ರಕರ್ತರಿಗೆ ನಗರದ ಗುರುದ್ವಾರದ ವಸತಿ ಗೃಹಗಳು ಹಾಗೂ ಖಾಸಗಿ ವಸತಿ ಗೃಹಗಳಲ್ಲಿ ಈಗಾಗಲೇ ವ್ಯವಸ್ಥೆ ಮಾಡಲಾಗಿದೆ ಎಂದು ಸಮಿತಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಆನಂದ ದೇವಪ್ಪ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-33-1928045215

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.