ಬೀದರ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದಲ್ಲಿ ಏ. 11 ಮತ್ತು 12ರಂದು ಆಯೋಜಿಸಲಾಗಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಅಂಗವಾಗಿ ಎರಡು ದಿನಗಳ ಕಾಲ ವಸ್ತು ಪ್ರದರ್ಶನ ಹಾಗೂ ಮಾರಾಟ ಮಳಿಗೆಗಳನ್ನು ತೆರೆಯಲಾಗುತ್ತಿದೆ.

ಸಮ್ಮೇಳನಕ್ಕೆ ಆಗಮಿಸುವ ಸಾರ್ವಜನಿಕರು ಹಾಗೂ ಪ್ರತಿನಿಧಿಗಳಿಗಾಗಿ ಈ ಮಳಿಗೆಗಳ ವ್ಯವಸ್ಥೆ ಮಾಡಲಾಗಿದ್ದು, ಆಸಕ್ತ ವ್ಯಾಪಾರಿಗಳು ಮುಂಗಡವಾಗಿ ಮಳಿಗೆಗಳನ್ನು ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ವಿಜಯಕುಮಾರ ಅಷ್ಟೂರೆ: 7090414243/7090661555, ರಾಜಕುಮಾರ ಸ್ವಾಮಿ:8861413556, ಶಿವಾನಂದ ಅಮರಗೋಳ: 7353306982 ಅವರನ್ನು ಸಂಪರ್ಕಿಸಬಹುದು.

ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ರಾಜ್ಯದ ವಿವಿಧೆಡೆಯ 2,300 ಪತ್ರಕರ್ತರು ಆನ್ಲೈನ್ನಲ್ಲಿ ಹೆಸರು ನೋಂದಣಿ ಮಾಡಿಸಿದ್ದಾರೆ. ಆನ್ಲೈನ್ ನೋಂದಣಿ ದಿನಾಂಕ ಮುಕ್ತಾಯಗೊಂಡಿದ್ದು, ಪತ್ರಕರ್ತರು ಏ. 11 ರಂದು ನೇರವಾಗಿ ಆಗಮಿಸಿ, ಹೆಸರು ನೋಂದಾಯಿಸಿ ಸಮ್ಮೇಳನದಲ್ಲಿ ಪಾಲ್ಗೊಳ್ಳಬಹುದು ಎಂದು ಸಂಘದ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-33-498284237

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.