ಕಮಲನಗರ: ‘ಉಚಿತ ಆರೋಗ್ಯ ತಪಾಸಣಾ ಶಿಬಿರದಿಂದ ಬಡವರು ಆರೋಗ್ಯಕ್ಕೆ ಸಂಬಂಧಪಟ್ಟಂತೆ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶವಾಗಿದೆ’ ಎಂದು ನಿವೃತ್ತ ಮುಖ್ಯ ಶಿಕ್ಷಕ ದೇವೇಂದ್ರ ಪಾಟೀಲ ಹೇಳಿದರು.

ತಾಲ್ಲೂಕಿನ ಡಿಗ್ಗಿ ಗ್ರಾಮದ ಅಪನಾ ಎಂಟರ್ಪ್ರೈಸೇಸ್ ಸಂಕೀರ್ಣದಲ್ಲಿ ಸೋಮವಾರ ಮಹಾಜನ ಆಸ್ಪತ್ರೆ ವತಿಯಿಂದ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ‘ಜೀವನದಲ್ಲಿ ಸಾಧನೆ ಮಾಡಲು ಸದೃಢ ಆರೋಗ್ಯ ಬಹಳ ಮುಖ್ಯ. ದೇಹವು ರೋಗಗಳ ನೆಲೆಯಾಗದಂತೆ ಎಚ್ಚರವಹಿಸಬೇಕು’ ಎಂದರು.

ನಿವೃತ್ತ ಶಿಕ್ಷಕ ಮಡಿವಾಳಪ್ಪ ಮುರ್ಕೆ ಮಾತನಾಡಿ, ‘ಪರಿಶುದ್ಧ ಗಾಳಿ, ನೀರು, ಆಹಾರವನ್ನು ನಾವು ಸದ್ಬಳಕೆ ಮಾಡಿಕೊಂಡು ಆರೋಗ್ಯಕರ ಜೀವನ ನಡೆಸಬೇಕು’ ಎಂದು ಹೇಳಿದರು.

ಅಮರ ಲಿಂಗಪ್ಪ ಮಹಾಜನ ಮಾತನಾಡಿ, ‘ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಈ ಆರೋಗ್ಯ ಶಿಬಿರ ಏರ್ಪಡಿಸಲಾಗಿದೆ. ಪ್ರತಿಯೊಬ್ಬರೂ ಆರೋಗ್ಯ ಕಾಪಾಡಿಕೊಂಡು ಜೀವನ ಶೈಲಿ ಸಾಧ್ಯವಾದಷ್ಟು ಬದಲಾವಣೆ ಮಾಡಿಕೊಳ್ಳುವುದು ಉತ್ತಮ’ ಎಂದು ಹೇಳಿದರು.

ಡಾ.ದಯಾನಂದ ಬಾಲಾಜಿರಾವ ಗವಳಿ, ಡಾ.ಐಶ್ವರ್ಯ ಅಮರ ಮಹಾಜನ, ಆಪ್ಟಿಶಿಯನ್ ಲಕ್ಷ್ಮಣ ಕುಂಡಗೀರ, ನಂದಕಿಶೋರ ಶ್ರೀಗಿರೆ, ಸಂತೋಷ ಬನವಾಸೆ, ಸೂರ್ಯಕಾಂತ ಬಿರಾದಾರ, ಬಾಬುರಾವ ಹರಪಾಳೆ, ಮಲ್ಲಿಕಾರ್ಜುನ ಚೋಬಳೆ, ಸಂತೋಷ ಬಿರಾದಾರ, ಮನೋಜ ಹಿರೇಮಠ, ಗಣೇಶ ಪಾಂಡರೆ, ಆಸ್ಪತ್ರೆಯ ಸಿಬ್ಬಂದಿ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.