ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹೆದ್ದಾರಿಯಲ್ಲಿ ಬಿರುಕು; ವರದಿ ಕೇಳಿದ ಸಂಸದ ಸಾಗರ್‌ ಖಂಡ್ರೆ

‘ಪ್ರಜಾವಾಣಿ’ ವರದಿ ಪರಿಣಾಮ
Published : 12 ಆಗಸ್ಟ್ 2024, 15:25 IST
Last Updated : 12 ಆಗಸ್ಟ್ 2024, 15:25 IST
ಫಾಲೋ ಮಾಡಿ
Comments

ಬೀದರ್‌: ‘ಬೀದರ್‌–ಕಮಲನಗರ ರಾಷ್ಟ್ರೀಯ ಹೆದ್ದಾರಿ 50ರ ಗುಣಮಟ್ಟದ ಸ್ಥಿತಿಗತಿ ಕುರಿತು 30 ದಿನಗಳ ಒಳಗೆ ಸಮಗ್ರ ತಾಂತ್ರಿಕ ವರದಿ ಸಲ್ಲಿಸಬೇಕು’ ಎಂದು ಸಂಸದ ಸಾಗರ್‌ ಖಂಡ್ರೆ ಅವರು ಕಲಬುರಗಿ ಈಶಾನ್ಯ ವಲಯದ ಲೋಕೋಪಯೋಗಿ ಇಲಾಖೆಯ ಮುಖ್ಯ ಎಂಜಿನಿಯರ್‌ಗೆ ತಿಳಿಸಿದ್ದಾರೆ.

ಈ ಸಂಬಂಧ ಅವರು ಸೋಮವಾರ (ಆಗಸ್ಟ್‌ 12) ಮುಖ್ಯ ಎಂಜಿನಿಯರ್‌ಗೆ ಪತ್ರ ಬರೆದಿದ್ದಾರೆ. ಸಾಕಷ್ಟು ಬಿರುಕುಗಳು ಮೂಡಿ ಸಿ.ಸಿ ಹೆದ್ದಾರಿ ಸಂಪೂರ್ಣ ಹದಗೆಟ್ಟಿದೆ. ಇದರಿಂದ ಅಪಘಾತಗಳು ಸಂಭವಿಸುತ್ತಿವೆ. ಸಾರ್ವಜನಿಕ ಹಿತಾಸಕ್ತಿ ಇದರಲ್ಲಿ ಅಡಗಿರುವುದರಿಂದ ವಿಸ್ತೃತ ವರದಿ ಕೊಡಬೇಕು. ಈ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆಗೆ ಚರ್ಚಿಸಿ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಪತ್ರದಲ್ಲಿ ವಿವರಿಸಿದ್ದಾರೆ.

‘ಬೀದರ್‌ ಕಮಲನಗರ ಹೈವೆಯೀಗ ಸಾವಿನ ಹೆದ್ದಾರಿ!’ ಶೀರ್ಷಿಕೆ ಅಡಿ ‘ಪ್ರಜಾವಾಣಿ’ ಆಗಸ್ಟ್‌ 7ರಂದು ವರದಿ ಪ್ರಕಟಿಸಿತ್ತು. ಅದರ ಬೆನ್ನಲ್ಲೇ ಸಂಸದರು ಹೆದ್ದಾರಿ ಬಗ್ಗೆ ಪಿಡಬ್ಲ್ಯೂಡಿಗೆ ವರದಿ ಕೇಳಿದ್ದಾರೆ.

ಸೋಮಣ್ಣ ಜತೆ ಭೇಟಿ:

ಸಂಸದ ಸಾಗರ್‌ ಖಂಡ್ರೆ ಅವರು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ನವದೆಹಲಿಯಲ್ಲಿ ಸೋಮವಾರ ಭೇಟಿ ಮಾಡಿ ಬೀದರ್‌ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ನೀರಾವರಿ ಯೋಜನೆಗಳ ಕುರಿತು ಚರ್ಚಿಸಿದರು.

ಪಿಎಂಕೆಎಸ್‌ವೈ ಯೋಜನೆಯಡಿ ಬರಪೀಡಿತ ಪ್ರದೇಶ ಬೀದರ್‌ ಲೋಕಸಭಾ ಕ್ಷೇತ್ರವು ಇದೆ. ಕೃಷಿ ಭೂಮಿಗೆ ಸಮರ್ಪಕ ನೀರಾವರಿ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಈಗಾಗಲೇ ಬೀದರ್‌ ಕ್ಷೇತ್ರದಿಂದ ಸುಮಾರು ₹115 ಕೋಟಿಯ 50 ಪ್ರಸ್ತಾವಗಳು ಕೇಂದ್ರದ ಮುಂದಿವೆ. ಈ ಯೋಜನಗಳಿಗೆ ರಾಜ್ಯ ಸರ್ಕಾರದಿಂದ ಅನುಮೋದನೆ ಸಿಕ್ಕಿದ್ದು, ಡಿ.ಪಿ.ಆರ್ ಸಹ ಮುಗಿದಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಗೊಳಿಸಬೇಕೆಂದು ಮನವಿ ಮಾಡಿದರು.

ಬೀದರ್‌–ಕಮಲನಗರ ರಾಷ್ಟ್ರೀಯ ಹೆದ್ದಾರಿ
ಬೀದರ್‌–ಕಮಲನಗರ ರಾಷ್ಟ್ರೀಯ ಹೆದ್ದಾರಿ

Cut-off box - ‘ಅಪಘಾತ ತಪ್ಪಿಸಲು ಕ್ರಮ’ (ಚಿತ್ರ ಇದೆ) ‘ಬೀದರ್‌–ಕಮಲನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳನ್ನು ತಪ್ಪಿಸಲು ಕ್ರಮ ಕೈಗೊಳ್ಳಲಾಗುವುದು. ಅಪಘಾತ ಸಂಭವಿಸುತ್ತಿರುವ ‘ಬ್ಲ್ಯಾಕ್ ಸ್ಪಾಟ್‌’ಗಳನ್ನು ಗುರುತಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಮಳೆಗೆ ನಗರದ ಪ್ರಮುಖ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ತಾತ್ಕಾಲಿಕವಾಗಿ ಮುಚ್ಚುವುದಕ್ಕೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT