ಬೀದರ್: ‘ಜಾಗತೀಕರಣದ ಪ್ರಭಾವದ ನಡುವೆ ಕನ್ನಡ ನುಡಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಮಹತ್ತರ ಪಾತ್ರ ವಹಿಸುತ್ತಿದೆ’ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ಹೇಳಿದರು.

ನಗರದ ಕನ್ನಡ ಭವನದಲ್ಲಿ ತಾಲ್ಲೂಕು ಕಸಾಪ ವತಿಯಿಂದ ಆಯೋಜಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಕಸಾಪ ರಾಜ್ಯದ ಅತಿ ದೊಡ್ಡ ಸಾಹಿತ್ಯ–ಸಾಂಸ್ಕೃತಿಕ ಸಂಘಟನೆಯಾಗಿದ್ದು, ಸುಮಾರು 3.5 ಲಕ್ಷಕ್ಕೂ ಹೆಚ್ಚು ಸದಸ್ಯರನ್ನು ಹೊಂದಿದೆ. ನಾಡು–ನುಡಿ, ನೆಲ–ಜಲ ಸಂರಕ್ಷಣೆ ಸೇರಿದಂತೆ ವಿವಿಧ ಜನಪರ ಕಾರ್ಯಕ್ರಮಗಳ ಮೂಲಕ ಕನ್ನಡಿಗರ ಹಿತ ಕಾಪಾಡುವ ಕಾರ್ಯವನ್ನು ನಿರಂತರವಾಗಿ ನಡೆಸುತ್ತಿದೆ’ ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶಿಕ್ಷಣ ತಜ್ಞ ಎಂ. ವಿಶ್ವೇಶ್ವರಯ್ಯ ಲಾಗೂರ್, ಬೀದರ್ ತಾಲ್ಲೂಕು ಕಸಾಪ ಅಧ್ಯಕ್ಷ ಟಿ.ಎಂ. ಮಚ್ಚೆ ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಎಂ.ಆರ್. ಮುನೇಶ್ವರ, ನಿವೃತ್ತ ಪ್ರಾಂಶುಪಾಲ ಬಸವರಾಜ ಬಳ್ಳೂರ, ಉಪಾಧ್ಯಕ್ಷೆ ಗೀತಾ ಕಮಲಾಪುರೆ, ಅಂಜಕುಮಾರ ಅಲ್ಲೂರೆ, ಆನಂದ ಪಾಟೀಲ, ಅಶೋಕ ಹೊಡಗೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ತಾಲ್ಲೂಕು ಕಸಾಪ ಕಾರ್ಯದರ್ಶಿ ಉಮೇಶ ಜಾಧವ ಸ್ವಾಗತಿಸಿದರು. ವೀರಶೆಟ್ಟಿ ಚನ್ನಶೆಟ್ಟಿ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-33-224481765

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.