ಬೀದರ್: ಬೇಸಿಗೆ ಕಾಲದಲ್ಲಿ ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಕಾರಂಜಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆಗೆ ಆದೇಶ ಹೊರಡಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಮೇ 4ರಂದು ನಡೆದ ಜಿಲ್ಲಾಧಿಕಾರಿ ಕಚೇರಿಯ ಸಭೆಯ ತೀರ್ಮಾನದಂತೆ ಈ ಕ್ರಮ ಕೈಗೊಳ್ಳಲಾಗಿದೆ. ಕಲಬುರಗಿಯ ಪ್ರಾದೇಶಿಕ ಆಯುಕ್ತರ ಆದೇಶದನ್ವಯ ಜಲಾಶಯದಿಂದ ನೀರು ಹರಿಸಲು ನಿರ್ದೇಶನ ನೀಡಲಾಗಿದೆ.

ಕಾರಂಜಾ ಜಲಾಶಯದಿಂದ ಮೇ 16ರಿಂದ ಜೂನ್ 6ರ ವರೆಗೆ ಎಡದಂಡೆ, ಬಲದಂಡೆ, ಕಾರಂಜಾ ಏತ ನೀರಾವರಿ ಹಾಗೂ ಅತಿವಾಳ ಏತ ನೀರಾವರಿ ನಾಲೆಗಳ ಮೂಲಕ ಒಟ್ಟು 0.6 ಟಿಎಂಸಿ ಅಡಿ ನೀರು ಹಂತ-ಹಂತವಾಗಿ ಹರಿಸಲಾಗುತ್ತದೆ. ಸಾರ್ವಜನಿಕರು ಕಾಲುವೆಗೆ ಇಳಿಯುವುದಾಗಲಿ, ಬಟ್ಟೆ ಒಗೆಯುವುದು ಅಥವಾ ಈಜಾಡುವುದಾಗಲಿ, ಕಾಲುವೆಯ ನೀರಿನಲ್ಲಿ ದನಕರುಗಳಿಗೆ ನೀರು ಕುಡಿಸುವುದಾಗಲಿ ಮಾಡಬಾರದು. ಈ ನಿಯಮಗಳನ್ನು ಪಾಲಿಸಿ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಬೀದರ್ ಕರ್ನಾಟಕ ನೀರಾವರಿ ನಿಗಮದ ನಿಯಮಿತದ ಕಾರ್ಯಪಾಲಕ ಎಂಜಿನಿಯರ್ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.