ಬೀದರ್: ಕಾರಂಜಾ ಯೋಜನೆಯಲ್ಲಿ ಜಮೀನು ಕಳೆದುಕೊಂಡು ಸಂತ್ರಸ್ತರಾದವರ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ ಇದುವರೆಗೆ ನಡೆದ ಬೆಳವಣಿಗೆ, ಸರ್ಕಾರ ಕೈಗೊಂಡ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಭೆ ಕರೆಯಬೇಕೆಂದು ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಆಗ್ರಹಿಸಿದೆ.

ಈ ಸಂಬಂಧ ಸಮಿತಿಯ ಪದಾಧಿಕಾರಿಗಳು ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು.

ಸರ್ಕಾರದ ಅಂಕಿ ಅಂಶಗಳ ಪ್ರಕಾರ, ಕಾರಂಜಾ ಯೋಜನೆಗೆ 1981ರಿಂದ 1986ರ ವರೆಗೆ ಒಟ್ಟು 21,217 ಎಕರೆ 36 ಗುಂಟೆ ಜಮೀನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಸದರಿ ಒಟ್ಟು 15,597 ಎಕರೆಯಲ್ಲಿ ಕಾರಂಜಾ ಅಣೆಕಟ್ಟೆ, 5,242 ಎಕರೆ 4 ಗುಂಟೆ ಕಾಲುವೆಗಳ ನಿರ್ಮಾಣಕ್ಕಾಗಿ, 378 ಎಕರೆ 14 ಗುಂಟೆ ಜಮೀನು ಪುನರ್ ವಸತಿಗೆ ನಿಗದಿಪಡಿಸಲಾಗಿದೆ. ಸರ್ಕಾರ ಪ್ರತಿ ಎಕರೆಗೆ ₹3 ಸಾವಿರ ಪರಿಹಾರ ನಿಗದಿಪಡಿಸಿ ವಿತರಿಸಿದೆ. ಆದರೆ, ಇದನ್ನು ಪ್ರಶ್ನಿಸಿ, ರೈತರು ಹೆಚ್ಚಿನ ಪರಿಹಾರಕ್ಕೆ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಪ್ರತಿ ಎಕರೆಗೆ ₹6ರಿಂದ ₹7,200 ನೀಡಬೇಕೆಂದು ನ್ಯಾಯಾಲಯ ಆದೇಶ ನೀಡಿದೆ. ಆದಕಾರಣ ಈ ಕುರಿತು ಚರ್ಚಿಸಿ ಗೊಂದಲ ನಿವಾರಿಸಲು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಭೆ ಕರೆಯಬೇಕೆಂದು ಒತ್ತಾಯಿಸಿದರು.

ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿ ಸಂತ್ರಸ್ತರ ಪ್ರಮುಖರ ಉಪಸ್ಥಿತಿಯಲ್ಲಿ ಒಂದು ಸಭೆ ನಡೆಸಿ ಕಾರಂಜಾ ಯೋಜನೆಗೆ ಭೂಮಿ ನೀಡಿ ನ್ಯಾಯಾಲಯಕ್ಕೆ ಮೊರೆ ಹೋಗಿ ಪರಿಹಾರ ಪಡೆದವರು ಹಾಗೂ ಪರಿಹಾರ ಪಡೆಯದವರ ವಿವರ ಹಂಚಿಕೊಂಡು, ಅವರಿಗೆ ನ್ಯಾಯಯುತ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸಮಿತಿಯ ಅಧ್ಯಕ್ಷ ಚಂದ್ರಶೇಖರ ಪಾಟೀಲ ಹುಚಕನಳ್ಳಿ, ಪ್ರಮುಖರಾದ ವಿನಯ್ ಕುಮಾರ್ ಮಾಳಗೆ, ಮಹೇಶ್ ಗೋರನಾಳಕರ್ ಮತ್ತಿತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-33-1546634596

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.