ಬೀದರ್: ಇಲ್ಲಿಯ ಮಹಾನಗರ ಪಾಲಿಕೆಯ ವಲಯ-1 ಮತ್ತು 2ರ ಆಯುಕ್ತ ನಾಗಣ್ಣ ಎಂ.ಪಿ.(ಕೆಎಂಎಎಸ್) ಅವರು ಅಕ್ರಮವಾಗಿ ನಿರ್ಮಾಣಗೊಂಡಿರುವ ಲೇಔಟ್ಗಳಲ್ಲಿ ಸುಮಾರು 800ಕ್ಕೂ ಹೆಚ್ಚು ಖಾತಾ ಮ್ಯೂಟೇಶನ್ ಹಾಗೂ ಡಿಜಿಟಲ್ ಖಾತಾಗಳನ್ನು ಮಾಡಿಕೊಟ್ಟಿರುವ ಕುರಿತು ಜಿಲ್ಲಾಧಿಕಾರಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಅವರಿಗೆ ವಿವಿಧ ಸಂಘಟನೆಗಳ ಮುಖಂಡರು ಸಲ್ಲಿಸಿದರು.

ಬೀದರ್ ನಗರಸಭೆ ಮಹಾನಗರ ಪಾಲಿಕೆಯಾದ ನಂತರ ಗ್ರಾಮೀಣ ಭಾಗದ ಸುಮಾರು 16 ಗ್ರಾಮಗಳನ್ನು ಪಾಲಿಕೆಗೆ ಸೇರ್ಪಡೆ ಮಾಡಲಾಗಿದೆ. ಈ ಹಿನ್ನೆಲೆ ನಗರ ಪ್ರದೇಶಗಳಲ್ಲಿ ಭೂಮಿ ಹಾಗೂ ನಿವೇಶನಗಳ ಮೌಲ್ಯ ಹೆಚ್ಚಾಗಿದೆ. ಈ ಪರಿಸ್ಥಿತಿಯನ್ನು ದುರುಪಯೋಗ ಪಡಿಸಿಕೊಂಡು ಕೆಲ ಭ್ರಷ್ಟ ಅಧಿಕಾರಿಗಳು ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಅಕ್ರಮ ಲೇಔಟ್ಗಳಲ್ಲಿ ಕೃಷಿ ಭೂಮಿಯನ್ನು ನಿವೇಶನಗಳಾಗಿ ಪರಿವರ್ತಿಸಿ, ಪ್ರತಿಯೊಂದು ಖಾತಾ ಮ್ಯೂಟೇಶನ್ ಮತ್ತು ಡಿಜಿಟಲ್ ಖಾತಾಗಳಿಗಾಗಿ ₹ 50 ಸಾವಿರದಿಂದ ₹1 ಲಕ್ಷದವರೆಗೆ ಹಣ ಪಡೆದು ಖಾತಾಗಳನ್ನು ಮಂಜೂರು ಮಾಡಲಾಗಿದೆ ಎಂದು ಸಂಘಟನೆಗಳು ಗಂಭೀರ ಆರೋಪ ಮಾಡಿವೆ.

ವಲಯ-2 ಆಯುಕ್ತರಾಗಿ ಬಂದ ನಂತರ ನಾಗಣ್ಣ ಎಂ.ಪಿ. ಅವರು ವಲಯ-1ರ ಪ್ರಭಾರವನ್ನೂ ವಹಿಸಿಕೊಂಡು, ಬೀದರ್ ನಗರ ಹಾಗೂ ಹೊಸದಾಗಿ ಸೇರ್ಪಡೆಗೊಂಡ ಗ್ರಾಮಗಳಲ್ಲಿನ ಆಸ್ತಿಗಳಿಗೆ ಅಕ್ರಮವಾಗಿ ಖಾತಾಗಳನ್ನು ನೀಡಿರುವುದರಿಂದ ಸರ್ಕಾರಕ್ಕೆ ನೂರಾರು ಕೋಟಿ ರೂಪಾಯಿ ನಷ್ಟ ಉಂಟಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಕುರಿತು ತಕ್ಷಣ ತನಿಖಾ ಸಮಿತಿ ರಚಿಸಿ, ಅಕ್ರಮವಾಗಿ ನೀಡಿರುವ ಖಾತಾ ಮ್ಯೂಟೇಶನ್ ಹಾಗೂ ಡಿಜಿಟಲ್ ಖಾತಾಗಳನ್ನು ರದ್ದುಪಡಿಸಿ, ಸಂಬಂಧಪಟ್ಟ ಅಧಿಕಾರಿಯನ್ನು ಅಮಾನತು ಮಾಡಬೇಕು ಎಂದು ಸಂಘಟನೆಗಳ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

ವಾರದೊಳಗೆ ಕ್ರಮ ಕೈಗೊಳ್ಳದಿದ್ದಲ್ಲಿ ಬೀದರ್ ಮಹಾನಗರ ಪಾಲಿಕೆ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ರಾಷ್ಟ್ರೀಯ ದಲಿತ ಬ್ರಿಗೇಡ್ ಜಿಲ್ಲಾಧ್ಯಕ್ಷ ಅವಿನಾಶ ದೀನೆ, ಯುವ ಘಟಕ ರಾಜ್ಯಾಧ್ಯಕ್ಷ ಶಿವ ಜೀರ್ಗೆ, ಜೈ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಕಲ್ಯಾಣರಾವ ಗುನಳ್ಳಿಕರ, ಸಂಜು ಲಕ್ಷ್ಮೀ ದೊಡ್ಡೆ, ಲಕ್ಷ್ಮಣ ಕಾಂಬಳೆ, ಮೋಹನ ಸಾಗರ, ಸಂತೋಷ ಪಾಟೀಲ, ಪ್ರದೀಪ ಸಾಗರ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-33-1682130691

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.