ಬೀದರ್: ನೂತನ ಕಾಂಗ್ರೆಸ್ ಸರ್ಕಾರದಲ್ಲಿ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಹಾಗೂ ವಿಶ್ವಕರ್ಮ ಸಮುದಾಯದ ಹಿರಿಯ ನಾಯಕ ಕೆ.ಪಿ. ನಂಜುಂಡಿಯವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಬೀದರ್ ಜಿಲ್ಲಾ ಯುವ ಘಟಕದ ಅಧ್ಯಕ್ಷ ಪ್ರಶಾಂತ ವಿಶ್ವಕರ್ಮ ಒತ್ತಾಯಿಸಿದ್ದಾರೆ.

‘ನಂಜುಂಡಿಯವರಿಗೆ ಸಚಿವ ಸ್ಥಾನ ನೀಡುವುದರ ಜೊತೆಗೆ ಪ್ರಮುಖ ಖಾತೆಯ ಜವಾಬ್ದಾರಿಯನ್ನೂ ವಹಿಸಬೇಕು. ಕೆ.ಪಿ. ನಂಜುಂಡಿಯವರು ಕಳೆದ 22 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಪ್ರಾಮಾಣಿಕ ಹಾಗೂ ನಿಷ್ಠಾವಂತ ಕಾರ್ಯಕರ್ತರಾಗಿ ದುಡಿಯುತ್ತಿದ್ದಾರೆ. ರಾಜ್ಯಾದ್ಯಂತ ಪಕ್ಷ ಸಂಘಟನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ರಾಜ್ಯದ ಅತಿ ಹಿಂದುಳಿದ ವರ್ಗಳ ಪೈಕಿ ವಿಶ್ವಕರ್ಮ ಸಮುದಾಯವು ಒಂದು. ಸಮುದಾಯದ ಪ್ರತಿನಿಧಿಗೆ ಸಚಿವ ಸ್ಥಾನ ನೀಡುವುದರಿಂದ ವಿಶ್ವಕರ್ಮ ಸಮಾಜಕ್ಕೆ ಗೌರವ ದೊರೆಯುವುದರ ಜೊತೆಗೆ ಹಿಂದುಳಿದ ವರ್ಗಗಳ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗಲಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-33-760481494

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.