ಬೀದರ್: ‘ಕೊಲ್ಲಿಯಲ್ಲಿ ಯುದ್ಧ ಮುಂದುವರೆದಿರುವ ಕಾರಣ ಬೀದರ್ ಜಿಲ್ಲೆಯ 43 ಜನ ಕುವೈತ್ನಲ್ಲಿ ಸಿಲುಕಿರುವ ಮಾಹಿತಿ ಲಭ್ಯವಾಗಿದ್ದು, ಅವರನ್ನು ಭಾರತಕ್ಕೆ ಕರೆತರಲು ಎಲ್ಲ ರೀತಿಯ ನೆರವು ಒದಗಿಸಲಾಗುವು’ದು ಎಂದು ಕೇಂದ್ರದ ಮಾಜಿಸಚಿವರೂ ಆದ ಬಿಜೆಪಿ ಮುಖಂಡ ಭಗವಂತ ಖೂಬಾ ತಿಳಿಸಿದ್ದಾರೆ.

‘ಉದ್ಯೋಗಕ್ಕಾಗಿ ಕುವೈತ್ಗೆ ಹೋಗಿ ಅಲ್ಲಿ ಸಿಲುಕಿರುವ ಬೀದರ್ ಲೋಕಸಭಾ ಕ್ಷೇತ್ರದ ಜನ ಆತಂಕಕ್ಕೆ ಒಳಗಾಗಿದ್ದಾರೆ. ಸದ್ಯ ನಾನು ಕೇರಳದಲ್ಲಿ ಬಿಜೆಪಿಯ ಚುನಾವಣಾ ಪ್ರಚಾರ ಕಾರ್ಯದಲ್ಲಿ ನಿರತನಾಗಿದ್ದೇನೆ. ಕುವೈತ್ನಲ್ಲಿ ಸಿಲುಕಿಕೊಂಡಿರುವ ಜನರಿಗೆ ಅಲ್ಲಿಂದಲೇ ಕರೆ ಮಾಡಿ ಮಾತನಾಡಿ, ಧೈರ್ಯ ತುಂಬಿದ್ದೇನೆ. ‘ಯಾರೂ ಭಯಪಡುವ ಅಗತ್ಯವಿಲ್ಲ. ನಿಮ್ಮ ಸುರಕ್ಷತೆಯ ಬಗ್ಗೆ ನಮಗೆ ಕಾಳಜಿಯಿದೆ’ ಎಂದು ಧೈರ್ಯ ತುಂಬಿದ್ದೇನೆ. ನಾನು ಅಧಿಕಾರದಲ್ಲಿದ್ದಾಗಲೂ ಹೊರದೇಶದಲ್ಲಿ ನಮ್ಮ ದೇಶದ ಜನರು ಸಂಕಷ್ಟದಲ್ಲಿದ್ದಾಗ ಭಾರತಕ್ಕೆ ಮರಳಿ ಕರೆ ತಂದಿರುವೆ. ಈಗಲೂ ಆ ಕೆಲಸ ಮಾಡುವೆ ಎಂದು ತಿಳಿಸಿದ್ದೇನೆ’ ಎಂದು ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ವಿದೇಶದಲ್ಲಿ ಸಂಕಷ್ಟಕ್ಕೀಡಾದ ಭಾರತೀಯರನ್ನು ರಕ್ಷಿಸಲು ಸದಾ ಬದ್ಧವಾಗಿದೆ. ಈಗಾಗಲೇ ಹಲವಾರು ದೇಶಗಳಿಂದ ಭಾರತೀಯರನ್ನು ಸುರಕ್ಷಿತವಾಗಿ ಕರೆದುಕೊಂಡು ಬರಲಾಗಿದೆ. ನಾನು ಅಧಿಕಾರದಲ್ಲಿ ಇಲ್ಲದಿದ್ದರೂ ಜನ ನನಗೆ ಕರೆ ಮಾಡಿ, ಕಷ್ಟ ಹೇಳಿಕೊಂಡಿದ್ದಾರೆ. ನಾನು ಈಗಾಗಲೇ ಕೇಂದ್ರದ ಸಂಬಂಧಿಸಿದ ಇಲಾಖೆಯ ಗಮನಕ್ಕೆ ವಿಷಯ ತಂದಿದ್ದೇನೆ. ಕುವೈತ್ನಿಂದ ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರದಿಂದ ಎಲ್ಲ ನೆರವು ಕೊಡಿಸಲಾಗುತ್ತಿದೆ’ ಎಂದು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-33-985288418

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.