ಬೀದರ್: ‘ನೂತನ ಸಚಿವ ಸಂಪುಟದಲ್ಲಿ ವೀರಶೈವ ಲಿಂಗಾಯತ ಸಮುದಾಯದ ಹೆಚ್ಚಿನ ಶಾಸಕರಿಗೆ ಪ್ರಾತಿನಿಧ್ಯ ಸಿಗಬೇಕು’ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ, ಶಾಸಕ ಈಶ್ವರ ಬಿ. ಖಂಡ್ರೆ ಪ್ರತಿಪಾದಿಸಿದ್ದಾರೆ.

‘ಶನಿವಾರ (ಮೇ 30) ಸಂಜೆ ಬೆಂಗಳೂರಿನಲ್ಲಿ ಶಾಸಕಾಂಗ ಪಕ್ಷದ ಸಭೆಯ ಬಳಿಕ ಪಕ್ಷದ ವರಿಷ್ಠರನ್ನು ಭೇಟಿ ಮಾಡುತ್ತೇನೆ. ನಾನು ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷನೂ ಆಗಿದ್ದು, ಸಮುದಾಯಕ್ಕೆ ಸೂಕ್ತ ಸ್ಥಾನಮಾನ ಸಿಗಬೇಕು ಎಂಬುದು ನಮ್ಮ ಆಶಯ’ ಎಂದು ಹೇಳಿದ್ದಾರೆ.

‘ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ಶ್ರದ್ಧೆಯಿಂದ ಮಾಡುತ್ತೇನೆ. ವರಿಷ್ಠರು ನನಗೆ ಡಿಸಿಎಂ ಹುದ್ದೆ ಬಗ್ಗೆ ನಿರ್ಧರಿಸಿದ್ದಾರೋ ಇಲ್ಲವೋ ತಿಳಿದಿಲ್ಲ. ಮೂರು ವರ್ಷ ಅರಣ್ಯ ಸಚಿವನಾಗಿ ಉತ್ತಮ ಕಾರ್ಯ ಮಾಡಿದ್ದೇನೆ’ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-51-850379112

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.