ಬೀದರ್: ‘ಜಿಲ್ಲೆಯಲ್ಲಿ ಸೆ. 13ರಂದು ಬೃಹತ್ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಂಡಿದ್ದು, ಇದರಲ್ಲಿ 29,327 ಪೆಂಡಿಂಗ್ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಗುರಿ ಹೊಂದಲಾಗಿದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಅರ್ಜುನ ಬನಸೋಡೆ ತಿಳಿಸಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಕಿ ಇರುವ ಪ್ರಕರಣಗಳನ್ನು ಸಂಧಾನದ ಮೂಲಕ ಇತ್ಯರ್ಥಗೊಳಿಸಲು ಯೋಚಿಸಲಾಗಿದೆ. ಇದಕ್ಕಾಗಿ ಎಲ್ಲ ರೀತಿಯ ಪೂರ್ವತಯಾರಿ ಮಾಡಿಕೊಳ್ಳಲಾಗಿದೆ ಎಂದರು.

ರಾಜಿ ಮಾಡಿಕೊಳ್ಳುವುದರಿಂದ ಕಕ್ಷಿದಾರನಿಗೆ ನ್ಯಾಯಾಲಯದ ಶುಲ್ಕ ವಾಪಸ್ ಸಿಗಲಿದೆ. ಮೇಲ್ಮನವಿಗೆ ಅವಕಾಶ ಇರುವುದಿಲ್ಲ. ಎರಡೂ ಕಡೆಯವರು ತಮ್ಮ ದ್ವೇಷ ಮರೆತು ಸುಮಧುರ ಬಾಂಧವ್ಯ ಹೊಂದಲು ಅವಕಾಶ ಇದೆ. ಇದಕ್ಕಾಗಿ ಯಾವುದೇ ಖರ್ಚು ಮಾಡಬೇಕಿಲ್ಲ ಎಂದು ತಿಳಿಸಿದರು.

ಆಸ್ತಿಪಾಲು, ಜೀವನಾಂಶ, ಚೆಕ್ ಬೌನ್ಸ್, ವಿದ್ಯುತ್ ಪ್ರಕರಣ, ಕಂದಾಯ ಅಪರಾಧಿಕ ಪ್ರಕರಣಗಳು, ಕಾರ್ಮಿಕರ ಪ್ರಕರಣಗಳು, ಬ್ಯಾಂಕ್ ಪ್ರಕರಣ, ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಸಂಧಾನದ ಮೂಲಕ ಇತ್ಯರ್ಥಕ್ಕೆ ಅವಕಾಶ ಇದೆ. ಜುಲೈ 12ರಂದು ನಡೆದ ಲೋಕ ಅದಾಲತ್ನಲ್ಲಿ ಜಿಲ್ಲೆಯಲ್ಲಿ ಒಟ್ಟು 52,812 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.