ಸಾಗರ್ ಖಂಡ್ರೆ ನಾಮಪತ್ರ ಸಲ್ಲಿಕೆ
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆಯವರ ಮಗ ಸಾಗರ್ ಖಂಡ್ರೆ ಅವರು ನಗರದಲ್ಲಿ ಮಂಗಳವಾರ ಬೀದರ್ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ತಾಯಿ ಡಾ.ಗೀತಾ ಈಶ್ವರ ಖಂಡ್ರೆ ಮಾವ ಗಂಗಾಧರ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಅಮೃತರಾವ್ ಚಿಮಕೋಡೆ ಅವರೊಂದಿಗೆ ತೆರಳಿ ಚುನಾವಣಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ಉಮೇದುವಾರಿಕೆ ಸಲ್ಲಿಸಿ ಪ್ರತಿಜ್ಞೆ ಸ್ವೀಕರಿಸಿದರು.